Select Your Language

Notifications

webdunia
webdunia
webdunia
webdunia

ವಿದ್ಯಾರ್ಥಿಗಳನ್ನು ಒತ್ತೆಯಾಳಾಗಿರಿಸಿಕೊಂಡಿದೆ ಉಕ್ರೇನ್ !

ವಿದ್ಯಾರ್ಥಿಗಳನ್ನು ಒತ್ತೆಯಾಳಾಗಿರಿಸಿಕೊಂಡಿದೆ  ಉಕ್ರೇನ್ !
ಕೀವ್ , ಗುರುವಾರ, 3 ಮಾರ್ಚ್ 2022 (11:34 IST)
ಕೀವ್ : ಯುದ್ಧ ಪೀಡಿತ ಉಕ್ರೇನ್ನಲ್ಲಿ ಸಿಲುಕಿರುವ ತನ್ನ ನಾಗರಿಕರನ್ನು ಸ್ಥಳಾಂತರಿಸಲು ಭಾರತವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ.

ಈ ನಡುವೆ ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್ ಒತ್ತೆಯಾಳಾಗಿ ಇರಿಸಿಕೊಂಡಿದೆ ಎಂದು ರಷ್ಯಾ ಆರೋಪಿಸಿದೆ. ಖಾರ್ಕಿವ್ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ರಷ್ಯಾ ಪ್ರಯತ್ನಿಸುತ್ತಿರುವಾಗ ಉಕ್ರೇನ್ ಪಡೆಗಳು ಭಾರತೀಯರನ್ನು ಒತ್ತೆಯಾಳಾಗಿ ಇರಿಸಿಕೊಂಡಿದೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ಬ್ರೀಫಿಂಗ್ನಲ್ಲಿ ತಿಳಿಸಿದೆ. 

ಈ ಕುರಿತಂತೆ ಮಾತನಾಡಿದ ಮೇಜರ್ ಜನರಲ್ ಇಗೊರ್ ಕೊನಾಶೆಂಕೋವ್, ನಮ್ಮ ತಿಳಿದುಬಂದಿರುವ ಮಾಹಿತಿಯ ಪ್ರಕಾರ ಖಾರ್ಕಿವ್ನಲ್ಲಿ, ಉಕ್ರೇನಿಯನ್ ಅಧಿಕಾರಿಗಳು ಉಕ್ರೇನಿಯನ್ ಪ್ರದೇಶವನ್ನು ತೊರೆದು ಬೇರೆಡೆಗೆ ಹೋಗಲು ಪ್ರಯತ್ನಿಸಿದ ಭಾರತೀಯ ವಿದ್ಯಾರ್ಥಿಗಳ ದೊಡ್ಡ ಗುಂಪನ್ನು ಬಲವಂತವಾಗಿ ಬಂಧಿಸುತ್ತಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಉಕ್ರೇನ್‍ನಿಂದ ಪಲಾಯನಗೊಂಡವರ ಸಂಖ್ಯೆ ಎಷ್ಟು ಗೊತ್ತ?