Select Your Language

Notifications

webdunia
webdunia
webdunia
webdunia

ರಾಜ್ಯಕ್ಕೆ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ : ಅಶ್ವಥ್ ನಾರಾಯಣ

ರಾಜ್ಯಕ್ಕೆ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ : ಅಶ್ವಥ್ ನಾರಾಯಣ
ಬೆಂಗಳೂರು , ಭಾನುವಾರ, 10 ಜುಲೈ 2022 (07:57 IST)
ಬೆಂಗಳೂರು : 2022-23ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ಗಳಿಗೆ ಇಡೀ ರಾಜ್ಯಕ್ಕೆ ಅನ್ವಯಿಸುವ ಹಾಗೆ ಏಕರೂಪದ ವೇಳಾಪಟ್ಟಿಯನ್ನು ಇದೇ ಮೊದಲ ಬಾರಿಗೆ ಸಿದ್ಧಪಡಿಸಲಾಗಿದೆ.
 
ರಾಜ್ಯದ ಎಲ್ಲಾ ವಿ.ವಿ.ಗಳು ಮತ್ತು ಕಾಲೇಜುಗಳು ಇದನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಈ ಏಕರೂಪದ ಕಾರ್ಯಕ್ರಮ ಪಟ್ಟಿಯಂತೆ, ರಾಜ್ಯದ ಉದ್ದಗಲಕ್ಕೂ ಪದವಿ ತರಗತಿಗಳಿಗೆ ಜುಲೈ 11ರಿಂದ ಪ್ರವೇಶಾತಿ ಆರಂಭವಾಗಲಿದ್ದು, ಆಗಸ್ಟ್ 17ರಿಂದ 22ರ ನಡುವೆ ತರಗತಿಗಳು ಆರಂಭವಾಗಲಿವೆ.

ಇದೇ ರೀತಿಯಲ್ಲಿ ಸ್ನಾತಕೋತ್ತರ ಕೋರ್ಸ್ಗಳಿಗೆ ಅಕ್ಟೋಬರ್ 15ರಿಂದ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದ್ದು, ನವೆಂಬರ್ 2ರಿಂದ 14ರ ನಡುವೆ ತರಗತಿಗಳಿಗೆ ಚಾಲನೆ ಸಿಗಲಿದೆ ಎಂದಿದ್ದಾರೆ. 

ಇದುವರೆಗೂ ರಾಜ್ಯದಲ್ಲಿ ಒಂದೊಂದು ವಿ.ವಿ.ಯೂ ತಮ್ಮ ಅನುಕೂಲಕ್ಕೆ ತಕ್ಕಂತೆ ಶೈಕ್ಷಣಿಕ ವೇಳಾಪಟ್ಟಿ ರೂಪಿಸಿಕೊಳ್ಳುತ್ತಿದ್ದವು. ಇದರಿಂದಾಗಿ ವಿದ್ಯಾರ್ಥಿಗಳಿಗೆ ಗೊಂದಲ ಮತ್ತು ಅನನುಕೂಲ ಆಗುತ್ತಿತ್ತು. ಇದನ್ನು ಗಮನಿಸಿ ಈ ಏಕರೂಪದ ವೇಳಾಪಟ್ಟಿಯನ್ನು ತರಲಾಗಿದೆ ಎಂದು ಅವರು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶ್ರೀ ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಹಗರಣ- ದೆಹಲಿಯಲ್ಲಿ ಪ್ರತಿಭಟನೆಯ ಎಚ್ಚರಿಕೆ