Select Your Language

Notifications

webdunia
webdunia
webdunia
webdunia

UP ಚುನಾವಣೆ ಮುಂದೂಡಿಕೆ!

UP ಚುನಾವಣೆ ಮುಂದೂಡಿಕೆ!
ಲಕ್ನೋ , ಶುಕ್ರವಾರ, 24 ಡಿಸೆಂಬರ್ 2021 (15:53 IST)
ಲಕ್ನೋ : ದೇಶದಲ್ಲಿ ಓಮಿಕ್ರಾನ್ ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ನಡುವೆ ನಡಯುತ್ತಿರುವ ಸಾರ್ವಜನಿಕ ಸಭೆ,

ಸಮಾರಂಭಗಳನ್ನು ನಿಲ್ಲಿಸಿ ಮುಂಬರುವ ಚುನಾವಣೆಯನ್ನು ಮುಂದೂಡಲು ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರಕ್ಕೆ ಅಲಹಾಬಾದ್ ಹೈಕೋರ್ಟ್ ಸೂಚನೆ ನೀಡಿದೆ. ಇದಕ್ಕೆ ಉತ್ತರಿಸಿದ ಚುನಾವಣಾ ಆಯೋಗ ಮುಂದಿನ ವಾರ ಸ್ಪಷ್ಟ ನಿರ್ಧಾರ ಕೈಗೊಳ್ಳುವುದಾಗಿ ಸ್ಪಷ್ಟ ಪಡಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ, ನಾವು ಉತ್ತರ ಪ್ರದೇಶಕ್ಕೆ ಹೋಗಿ ಪರಿಸ್ಥಿತಿ ಅವಲೋಕನ ಮಾಡುತ್ತೇನೆ. ವಿಧಾನಸಭಾ ಚುನಾವಣೆಯನ್ನು ಮುಂದೂಡುವ ಬಗ್ಗೆ ಮುಂದಿನ ವಾರ ಸ್ಪಷ್ಟ ನಿರ್ಧಾರ ಕೈಗೊಳ್ಳುತ್ತೇವೆ. ಈಗಾಗಲೇ ಚುನಾವಣೆಯನ್ನು ಮುಂದೂಡುವಂತೆ ಹಲವು ಅಭಿಪ್ರಾಯ ಕೇಳಿಬರುತ್ತಿದೆ ಎಂದರು.

2022ರ ಆರಂಭದಲ್ಲಿ ಉತ್ತರ ಪ್ರದೇಶ, ಪಂಜಾಬ್, ಗೋವಾ, ಉತ್ತರಾಖಂಡ ಮತ್ತು ಮಣಿಪುರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ನಡುವೆ ದೇಶದಲ್ಲಿ ಓಮಿಕ್ರಾನ್ ಹೆಚ್ಚಳವಾಗುತ್ತಿರುವುದರಿಂದ ಚುನಾವಣೆಗಳನ್ನು ಮುಂದೂಡುವಂತೆ ಚುನಾವಣಾ ಆಯೋಗ ಮತ್ತು ಮೋದಿ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಕೋವಿಡ್ನಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ಪರಿಹಾರ ವಿತರಣೆಗೆ ಡೇಟ್ ಫಿಕ್ಸ್