Publish Date: Fri, 25 Mar 2022 (15:05 IST)
Updated Date: Fri, 25 Mar 2022 (17:44 IST)
ಮೈಸೂರು : ಮುಂಬರುವ ಚುನಾವಣೆಯೇ ನನ್ನ ಕೊನೆಯ ಚುನಾವಣೆ. ನಂತರ ನಾನು ಚುನಾವಣಾ ರಾಜಕಾರಣದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಗೆ ಬಹಳಷ್ಟು ಕ್ಷೇತ್ರದ ನಾಯಕರು ತಮ್ಮಲ್ಲಿ ಸ್ಪರ್ಧಿಸುವಂತೆ ಕರೆಯುತ್ತಿದ್ದಾರೆ. ಆದರೆ ನಾನು ಇನ್ನೂ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂದು ನಿರ್ಧರಿಸಿಲ್ಲ. ಚುನಾವಣೆಗೆ ಇನ್ನೂ ಒಂದು ವರ್ಷವಿದೆ.
ಈಗಲೇ ಈ ಬಗ್ಗೆ ತೀರ್ಮಾನ ಮಾಡಲ್ಲ. ವರುಣಾ, ಚಾಮುಂಡೇಶ್ವರಿ, ಹುಣಸೂರು ಕ್ಷೇತ್ರದಿಂದಲ್ಲೂ ಒತ್ತಡವಿದೆ. ಮುಂದಿನ ಚುನಾವಣೆಯೇ ನನ್ನ ಕೊನೆಯ ಚುನಾವಣೆಯಾಗಲಿದ್ದು, ನಂತರ ನಾನು ಸಕ್ರೀಯ ರಾಜಕಾರಣದಲ್ಲಿ ಮಾತ್ರ ಇರುತ್ತೇನೆ ಎಂದು ಹೇಳಿದ್ದಾರೆ.