Webdunia - Bharat's app for daily news and videos

Install App

5 ವರ್ಷದ ಮೇಲ್ಪಟ್ಟ ಮಕ್ಕಳಿಗೂ ಲಸಿಕೆ!

Webdunia
ಶುಕ್ರವಾರ, 24 ಡಿಸೆಂಬರ್ 2021 (16:33 IST)
5 ವರ್ಷ ಮೇಲ್ಪಟ್ಟ ಎಲ್ಲಾ ಮಕ್ಕಳು ಲಸಿಕೆಯನ್ನು ಪಡೆಯಲು ಅರ್ಹರು ಎಂದು ಹೇಳುವ ಮೂಲಕ, ಮಕ್ಕಳಿಗೂ ಕೊರೊನಾ ಲಸಿಕೆಯನ್ನು ಕಡ್ಡಾಯಗೊಳಿಸಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಈಕ್ವೆಡಾರ್ ಪಾತ್ರವಾಗಿದೆ.
 
ಅಮೆರಿಕದಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್ ಹಾವಳಿ ಹೆಚ್ಚುತ್ತಿದ್ದಂತೆ ಈಕ್ವೆಡಾರ್ ದೇಶ ಮಕ್ಕಳಿಗೂ ಲಸಿಕೆಯನ್ನು ಕಡ್ಡಾಯಗೊಳಿಸಿದೆ. ಗುರುವಾರ ದೇಶದಲ್ಲಿ 5 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕೋವಿಡ್ ಲಸಿಕೆಯನ್ನು ಕಡ್ಡಾಯಗೊಳಿಸಿರುವುದಾಗಿ ಆರೋಗ್ಯ ಸಚಿವಾಲಯ ತಿಳಿಸಿದೆ.

ಈಕ್ವೆಡಾರ್ನ 1.7 ಕೋಟಿ ಜನಸಂಖ್ಯೆಯಲ್ಲಿ ಸುಮಾರು 69% ಜನರು ಇಲ್ಲಿಯ ವರೆಗೆ ಲಸಿಕೆಯ 2 ಡೋಸ್ಗಳನ್ನು ಪಡೆದಿದ್ದಾರೆ. 9 ಲಕ್ಷ ಜನರು ಬೂಸ್ಟರ್ ಡೋಸ್ ಪಡೆದಿದ್ದಾರೆ. ಇದೀಗ 5 ವರ್ಷ ಮೇಲ್ಪಟ್ಟ ಮಕ್ಕಳೂ ಲಸಿಕೆ ಪಡೆಯಲು ಅರ್ಹರು ಎಂದು ಘೋಷಿಸಲಾಗಿದೆ. 

ಈಕ್ವೆಡಾರ್ನಲ್ಲಿ ಈವರೆಗೆ ಸುಮಾರು 5.4 ಲಕ್ಷ ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಅಂದಾಜು 33 ಸಾವಿರ ಮಂದಿ ಮೃತಪಟ್ಟಿದ್ದಾರೆ. ಜನರಿಗೆ ವೈದ್ಯಕೀಯ ಕಾರಣಗಳಿದ್ದರೆ ಮಾತ್ರವೇ ಲಸಿಕೆ ಪಡೆಯಲು ವಿನಾಯಿತಿ ನೀಡಲಾಗುತ್ತದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments