ನವದೆಹಲಿ : ಜನವರಿ 3 ರಿಂದ 15 ರಿಂದ 18 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಮಹತ್ವದ ಘೋಷಣೆ ಮಾಡಿದ್ದಾರೆ.
ಶನಿವಾರ ರಾತ್ರಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಶಾಲಾ- ಕಾಲೇಜುಗಳಲಲ್ಲಿ ಲಸಿಕೆ ನೀಡಲಾಗುವುದು. ಫ್ರಂಟ್ಲೈನ್ ವರ್ಕರ್ಸ್ಗೆ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ತಿಳಿಸಿದರು.
ಮೊದಲಿಗೆ ಎಲ್ಲರಿಗೂ ಕ್ರಿಸ್ಮಸ್ ಶುಭಾಶಯ ತಿಳಿಸಿದ ಅವರು, ವಿಶ್ವದಲ್ಲೆಡೆ ಓಮಿಕ್ರಾನ್ ಹೆಚ್ಚಾಗುತ್ತಿದೆ. ಹೀಗಾಗಿ ಲಸಿಕೆ ಪಡೆಯದವರು ಕೂಡಲೇ ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ ಮಾಡಿದರು.