Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಶಾಂತಸ್ಥಿತಿಗೆ ತಲುಪಿದ ವರುಣ

ರಾಜ್ಯದಲ್ಲಿ ಶಾಂತಸ್ಥಿತಿಗೆ ತಲುಪಿದ ವರುಣ
ಬೆಂಗಳೂರು , ಸೋಮವಾರ, 23 ಮೇ 2022 (07:03 IST)
ಬೆಂಗಳೂರು : ರಾಜ್ಯದಲ್ಲಿ ಅಬ್ಬರಿಸುತ್ತಿದ್ದ ವರುಣದೇವ ಈಗ ಕೊಂಚ ಶಾಂತವಾಗಿದ್ದಾನೆ.

ಮುಂಗಾರು ಪೂರ್ವ ಮಳೆಯಿಂದಾಗಿ ರಾಜ್ಯದಲ್ಲಿ ಅಪಾಯ ಹಾನಿ ಸಂಭವಿಸಿದೆ. ಈವರೆಗೆ 7,010 ಹೆಕ್ಟೇರ್ ಕೃಷಿ ಬೆಳೆ ನಾಶವಾಗಿದ್ರೆ, 5,736 ಹೆಕ್ಟೇರ್ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ. 4,242 ಮನೆಗಳಿಗೆ ಭಾಗಶಃ ಹಾನಿಯಾಗಿದ್ರೆ, 430 ಜಾನುವಾರು ಹಾಗೂ 12 ಜನರ ಸಾವಾಗಿದೆ.

ಕೊಪ್ಪಳದ ತುಂಗಭದ್ರಾ ಜಲಾಶಯ 65 ವರ್ಷಗಳ ಇತಿಹಾಸದಲ್ಲಿ ಮೇ ತಿಂಗಳಲ್ಲಿ 28 ಟಿಎಂಸಿ ನೀರು ಸಂಗ್ರಹವಾಗಿದೆ. ನಿನ್ನೆ ಒಂದೇ ದಿನ 8 ಟಿಎಂಸಿ ಹರಿದು ಬಂದಿದೆ. ಕಳೆದ ವರ್ಷ ಮೇ ತಿಂಗಳಲ್ಲಿ 7 ಟಿಎಂಸಿ ನೀರು ಸಂಗ್ರಹವಾಗಿತ್ತು. ಸದ್ಯ ಡ್ಯಾಂಗೆ 90 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರಿನ ಒಳಹರಿವಿದೆ. 255 ಕ್ಯೂಸೆಕ್ ನೀರು ಹೊರಗೆ ಬಿಡಲಾಗ್ತಿದೆ.

ಕೊಡಗು ಜಿಲ್ಲೆಯಾದ್ಯಂತ ಮಳೆ ಬಿರುಸು ಪಡೆದಿದೆ. ಅಬ್ಬಿ ಜಲಪಾತ ಮೈದುಂಬಿದ್ದು ಪ್ರವಾಸಿಗರನ್ನು ಆಕರ್ಷಿಸ್ತಿದೆ.  ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಜಲಾಶಯದ ಗೋಡೆ ಹತ್ತಿದ್ದ ಯುವಕ ನೋಡ ನೊಡುತ್ತಿದ್ದಂತೆಯೇ ಹಾರಿ ಕೆಳಗೆ ಬಿದ್ದಿದ್ದಾನೆ. ಈ ಭಯಾನಕ ದೃಶ್ಯ ಅಲ್ಲಿದ್ದವರ ಮೊಬೈಲ್ನಲ್ಲಿ ಸೆರೆಯಾಗಿದೆ.

ಆತ ಗೌರಿಬಿದನೂರು ಮೂಲದವನಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅತ್ತ ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಮಿತಿ ಮೀರಿದ್ದು, 25 ಮಂದಿ ಸಾವನ್ನಪ್ಪಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಟಿಎಂಸಿಗೆ ಮರಳಿದ ಬಿಜೆಪಿ ಸಂಸದ ಅರ್ಜುನ್ ಸಿಂಗ್!