Webdunia - Bharat's app for daily news and videos

Install App

ನಿಯಮ ಉಲ್ಲಂಘನೆ : ದಂಡ ಪಾವತಿಗೆ 50% ಡಿಸ್ಕೌಂಟ್

Webdunia
ಶನಿವಾರ, 4 ಫೆಬ್ರವರಿ 2023 (07:30 IST)
ಬೆಂಗಳೂರು : ಸಂಚಾರಿ ನಿಯಮಗಳನ್ನು ಪಾಲಿಸದೇ ಉಲ್ಲಂಘನೆ ಮಾಡಿ ದಂಡವನ್ನು ಬಾಕಿ ಉಳಿಸಿಕೊಂಡಿರುವ ಸವಾರರಿಗೆ ಸಿಹಿ ಸುದ್ದಿ.

ಬಾಕಿ ಉಳಿಸಿಕೊಂಡ ದಂಡದಲ್ಲಿ ಶೇ.50 ರಿಯಾಯಿತಿ ನೀಡಿ ಸರ್ಕಾರ ಆದೇಶ ಪ್ರಕಿಟಿದೆ. ಸಾರಿಗೆ ಮತ್ತು ರಸ್ತೆ ಸುರಕ್ಷತಾ ಆಯುಕ್ತರು ಸರ್ಕಾರಕ್ಕೆ ದಂಡ ಕಡಿತಗೊಳಿಸುವ ಕುರಿತು ಮನವಿ ಮಾಡಿದ್ದರು.

ಈ ಸಂಬಂಧ ಹೈಕೋರ್ಟ್ (ನ್ಯಾಯಮೂರ್ತಿ, ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ನ್ಯಾ ಬಿ.ವೀರಪ್ಪರವರ ನೇತೃತ್ವದಲ್ಲಿ ಜ.27 ರಂದು ಸಭೆ ನಡೆದು ನಿರ್ಣಯ ಕೈಗೊಳ್ಳಲಾಗಿತ್ತು.

ಈಗ ಪೊಲೀಸ್ ಇಲಾಖೆ ರಾಜ್ಯಾದ್ಯಂತ ಇ ಚಲನ್ ಗಳ ಮೂಲಕ ಹಾಕಿರುವ ದಂಡದ ಮೊತ್ತದಲ್ಲಿ ಶೇ.50 ರಿಯಾಯಿತಿ ನೀಡಿ ಸರ್ಕಾರದ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಸಾರಿಗೆ ಇಲಾಖೆಯ ಫೆ.11ರ ಒಳಗೆ ಇತ್ಯರ್ಥವಾಗುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ದಂಡದ ಮೊತ್ತದಲ್ಲಿ ಶೇ.50ರಷ್ಟು ವಿನಾಯಿತಿ ನೀಡಿ ಆದೇಶ ಪ್ರಕಟಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯನ್ನುಕೊಂದು ರುಂಡ ಫ್ರಿಡ್ಜ್ ನಲ್ಲಿಟ್ಟಿದ್ದ ಪತಿಗೆ ಈಗಲೂ ಸ್ವಲ್ಪವೂ ಪಶ್ಚಾತ್ತಾಪವಿಲ್ವಂತೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಡಲಿನಲ್ಲಿ ಕಂಡುಬಂದ ಈ ದೈತ್ಯ ಆಮೆಯನ್ನು ಕಂಡು ವಿಜ್ಞಾನಿಗಳೇ ಶಾಕ್: ಅಪರೂಪದ ದೃಶ್ಯ ಇಲ್ಲಿದೆ Video

ಅಡುಗೆ ಮಾಡುತ್ತಿದ್ದಾಗ ಬಾಂಬ್ ನಂತೆ ಸಿಡಿದ ಕುಕ್ಕರ್, ಮಹಿಳೆಗೆ ಆಗಿದ್ದೇನು ನೋಡಿ Video

ಜನರು ದಂಗೆ ಏಳುವ ಮುನ್ನ ವಿಧಾನಸಭೆ ವಿಸರ್ಜಿಸಿ: ವಿಜಯೇಂದ್ರ

ಮುಂದಿನ ಸುದ್ದಿ
Show comments