Webdunia - Bharat's app for daily news and videos

Install App

ವಕೀಲರ ಸಂಘದ ಅಧ್ಯಕ್ಷರಾಗಿ ವಿವೇಕ್ ರೆಡ್ಡಿ ಆಯ್ಕೆ

Webdunia
ಸೋಮವಾರ, 20 ಡಿಸೆಂಬರ್ 2021 (07:03 IST)
ಬೆಂಗಳೂರು : ಪ್ರತಿಷ್ಠಿತ ಬೆಂಗಳೂರು ವಕೀಲರ ಸಂಘದ ಚುನಾವಣೆ ಭಾನುವಾರ (ಡಿ.19) ನಡೆಯಿತು. ನೂತನ ಅಧ್ಯಕ್ಷರಾಗಿ ವಿವೇಕ್ ರೆಡ್ಡಿ 1900ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದರು.

ಸ್ಪರ್ಧೆಯೊಡ್ಡಿದ ನಿಕಟಪೂರ್ವ ಅಧ್ಯಕ್ಷ ಎ.ಪಿ.ರಂಗನಾಥ್ 2ನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು. ವಿವೇಕ್ ರೆಡ್ಡಿ ಪರವಾಗಿ 4804 ಮತಗಳು, ಎ.ಪಿ.ರಂಗನಾಥ್ ಪರವಾಗಿ 2894 ಮತಗಳು, ರಾಜಣ್ಣ ಪರವಾಗಿ 2545 ಮತಗಳು ಹಾಗೂ ಎಚ್.ಸಿ.ಶಿವರಾಮು ಪರವಾಗಿ 878 ಮತಗಳು ಚಲಾವಣೆಯಾಗಿದ್ದವು.

ಬೆಂಗಳೂರು ವಕೀಲರ ಸಂಘವು ಏಷ್ಯಾದಲ್ಲಿಯೇ ಅತ್ಯಂತ ದೊಡ್ಡ ವಕೀಲರ ಸಂಘ ಎನಿಸಿದೆ. ಸಿಟಿ ಸಿವಿಲ್ ಕೋರ್ಟ್ನಲ್ಲಿ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಿತು.

ವಕೀಲರ ಸಂಘದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಖಜಾಂಚಿ ಸ್ಥಾನಗಳೊಂದಿಗೆ ಹೈಕೋರ್ಟ್ನ 7, ಮೆಯೊಹಾಲ್ ಮತ್ತು ಮ್ಯಾಜಿಸ್ಟ್ರೇಟ್ ಕೋರ್ಟ್ ಘಟಕಗಳ ತಲಾ 5 ಹಾಗೂ ಸಿಟಿ ಸಿವಿಲ್ ಕೋರ್ಟ್ನ 12 ಕಾರ್ಯಕಾರಿ ಸದಸ್ಯ ಸಮಿತಿ ಸ್ಥಾನಗಳಿಗೂ ಚುನಾವಣೆ ನಡೆಯಿತು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments