Select Your Language

Notifications

webdunia
webdunia
webdunia
webdunia

ಶನಿವಾರದಿಂದಲೇ ಕರ್ನಾಟಕದಲ್ಲಿ ಮತದಾನ ಶುರು

ಶನಿವಾರದಿಂದಲೇ ಕರ್ನಾಟಕದಲ್ಲಿ ಮತದಾನ ಶುರು
ಬೆಂಗಳೂರು , ಶನಿವಾರ, 29 ಏಪ್ರಿಲ್ 2023 (12:08 IST)
ಬೆಂಗಳೂರು : ಮೇ 10ರಂದು ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆ 80 ವರ್ಷ ಮೇಲ್ಪಟ್ಟವರು, ಅಂಗವಿಕಲರು ಮತ್ತು ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶವನ್ನು ಚುನಾವಣಾ ಆಯೋಗವು ನೀಡಿದೆ.
 
ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಶನಿವಾರದಿಂದ ಬ್ಯಾಲೆಟ್ ಪೇಪರ್ ವೋಟಿಂಗ್ ನಡೆಯಲಿದೆ. ಏಪ್ರಿಲ್ 29ರಿಂದ ಮೇ 6ರವರೆಗೆ ಬ್ಯಾಲೆಟ್ ಪೇಪರ್ ವೋಟಿಂಗ್ ನಡೆಯಲಿದ್ದು, 80 ವರ್ಷ ಮೇಲ್ಪಟ್ಟವರು,

ಅಂಗವಿಕಲರು ಹಾಗೂ ವಿಕಲಚೇತನರಿಗೆ ಚುನಾವಣಾ ಸಿಬ್ಬಂದಿಗಳು ಬ್ಯಾಲೆಟ್ ಪೇಪರ್ ನೀಡುವ ಮೂಲಕ ಮತದಾನ ಪ್ರಕ್ರಿಯೆಯನ್ನು ನಡೆಸಲಿದ್ದಾರೆ. ರಾಜ್ಯದಲ್ಲಿ ಒಟ್ಟು 12.15 ಲಕ್ಷ ಜನ 80 ವರ್ಷ ಮೇಲ್ಪಟ್ಟ ಮತದಾರರಿದ್ದು, ಮನೆಯಿಂದಲೇ ಮತದಾನ ಮಾಡಲಿದ್ದಾರೆ. 

ಬೆಂಗಳೂರಿನಲ್ಲಿ 2 ಲಕ್ಷಕ್ಕೂ ಹೆಚ್ಚು ಮಂದಿ 80 ವರ್ಷ ಮೇಲ್ಪಟ್ಟವರಿದ್ದಾರೆ. ಅದರಲ್ಲಿ 9,152 ಮಂದಿ ಮತದಾರರು ಮನೆಯಿಂದಲೇ ಮತದಾನ ಮಾಡಲಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಚಾರದ ವೇಳೆ ಪರಮೇಶ್ವರ್ ತಲೆಗೆ ಕಲ್ಲೇಟು, ರಕ್ತಸ್ರಾವ