Select Your Language

Notifications

webdunia
webdunia
webdunia
webdunia

ಹೆದ್ದಾರಿಗೆ ನುಗ್ಗಿದ ನೀರು : ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್ ಜಾಮ್

ಹೆದ್ದಾರಿಗೆ ನುಗ್ಗಿದ ನೀರು :  ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್ ಜಾಮ್
ನೆಲಮಂಗಲ , ಸೋಮವಾರ, 5 ಸೆಪ್ಟಂಬರ್ 2022 (10:33 IST)
ನೆಲಮಂಗಲ : ತಡರಾತ್ರಿ ಸುರಿದ ಧಾರಾಕಾರ ಮಳೆಗೆ ನೆಲಮಂಗಲದಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.

ರಾತ್ರೀ ಇಡೀ ಸುರಿದ ಭಾರೀ ಮಳೆಗೆ ಮುಕ್ತನಾತೇಶ್ವರ ದೇವಾಲಯದ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಅಮಾನಿಕೆರೆ, ಹಾಗೂ ಬಿನ್ನಮಂಗಲದ ಕೆರೆಗಳು ಕೋಡಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಎಂಜಿ ರಸ್ತೆ ಸಂಪರ್ಕ ಕಡಿತಗೊಳಿಸಲಾಗಿದೆ ಹಾಗೂ ಜನಪ್ರಿಯ ಅಪಾರ್ಟ್ಮೆಂಟ್ ರಸ್ತೆ ಕೂಡ ಜಲಾವೃತಗೊಂಡಿದೆ. 

ಅಮಾನಿಕೆರೆ ಹಾಗೂ ಬಿನ್ನಮಂಗಲದ ಕೆರೆಗಳು ಕೋಡಿ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿಗೆ ಕೆರೆಯ ನೀರು ನುಗ್ಗಿದ್ದು, ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಅವಾಂತರ ಸೃಷ್ಟಿಯಾಗಿದೆ.

ಅಲ್ಲದೇ ನೂರಾರು ವಾಹನಗಳು ಮಳೆಯ ನೀರಿನಲ್ಲಿ ಮುಳುಗಡೆಯಾಗಿದೆ. ಇದೀಗ ನೆಲಮಂಗಲ ಬೆಂಗಳೂರು ಸರ್ವೀಸ್ ರಸ್ತೆಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಮತ್ತೊಂದೆಡೆ ಅಡಕಮಾರನಹಳ್ಳಿಯ ಜೈನ್ ಟೆಂಪಲ್ ಕೂಡ ನಾಲ್ಕೈದು ಅಡಿ ನೀರಿನಿಂದ ಜಲಾವೃತವಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

BPL ಕಾರ್ಡ್ ಬಳಕೆದಾರರಿಗೆ ಉಚಿತ ವಿದ್ಯುತ್ ಆದೇಶ ಹಿಂಪಡೆದ ಸರ್ಕಾರ