Webdunia - Bharat's app for daily news and videos

Install App

ಭಾರೀ ಮಳೆಗೆ ಮನೆಗಳಿಗೆ ನುಗ್ಗಿತು ನೀರು!

Webdunia
ಶನಿವಾರ, 30 ಜುಲೈ 2022 (14:14 IST)
ಮಂಗಳೂರು : ನಗರದಲ್ಲಿ ಇಂದು ಬೆಳಗ್ಗೆ ಸತತವಾಗಿ ಸುರಿದ ಧಾರಾಕಾರ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದ್ದು, ಮನೆಯಲ್ಲಿದ್ದ ವಸ್ತುಗಳು, ಆಹಾರ ಪದಾರ್ಥಗಳು ನೀರು ಪಾಲಾಗಿದ್ದು, ರಸ್ತೆಗಳೆಲ್ಲ ನೀರು ತುಂಬಿಕೊಂಡು ಕೆರೆಯಂತಾಗಿದೆ.

ಇಂದು ಮುಂಜಾನೆಯಿಂದ ಮೂರ್ನಾಲ್ಕು ಗಂಟೆ ನಿರಂತರವಾಗಿ ಸುರಿದ ಮಳೆಗೆ ಶಿವನಗರದಲ್ಲಿ ಐವತ್ತಕ್ಕೂ ಹೆಚ್ಚು ಮನೆಗಳಿಗೆ ಅಪಾರ ಪ್ರಮಾಣದಲ್ಲಿ ನೀರು ನುಗ್ಗಿದ್ದರಿಂದ ಮನೆಯಲ್ಲಿದ್ದ ವಸ್ತಗಳೆಲ್ಲಾ ನೀರಿನಲ್ಲಿ ತೇಲಿದವು.

ಎಲೆಕ್ಟ್ರಾನಿಕ್ ಉಪಕರಣಗಳು, ಹಾಸಿಗೆ, ಪಾತ್ರೆಗಳು, ಆಹಾರ ಪದಾರ್ಥಗಳೆಲ್ಲಾ ನೀರು ಪಾಲಾದವು. ಮನೆಯಿಂದ ನೀರು ಹೊರಹಾಕಲು ಇಲ್ಲಿನ ನಿವಾಸಿಗಳು ಹರಸಾಹಸಪಟ್ಟರು.

ಮನೆಗಳಿಗೆ ನೀರು ನುಗ್ಗಿದ್ದರಿಂದ ಮನೆಯಲ್ಲಿ ಇರಲಾಗದೆ ಮನೆಯಿಂದ ಹೊರ ಬಂದು ಕಾಲ ಕಳೆಯಬೇಕಾಯಿತು. ಸ್ಥಳಕ್ಕೆ ಮಹಾನಗರ ಪಾಲಿಕೆ ಸಿಬ್ಬಂದಿ ಆಗಮಿಸಿ ಕಸ ಕಟ್ಟಿಕೊಂಡಿದ್ದ ಡ್ರೈನೇಜ್, ಚರಂಡಿಗಳನ್ನು ಸ್ವಚ್ಛ ಮಾಡಿದರು. ಶಿವನಗರದ ರಸ್ತೆಗಳೆಲ್ಲೆಲ್ಲಾ ನೀರು ತುಂಬಿಕೊಂಡು ಕೆರೆಯಂತಾಗಿದ್ದರೆ, ವಾಹನಗಳು ನೀರಿನಲ್ಲಿ ತೇಲಿದವು. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments