Publish Date: Thu, 13 Jan 2022 (07:25 IST)
Updated Date: Wed, 12 Jan 2022 (22:28 IST)
ಬೆಂಗಳೂರು : ಪಾದಯಾತ್ರೆ ಮುಂದುವರಿಸಬೇಕೋ ಅಥವಾ ಬೇಡವೋ ಎಂದು ನ್ಯಾಯಾಲಯ ನೀಡುವ ಆದೇಶವನ್ನು ನಾವು ಪಾಲನೆ ಮಾಡುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಾದಯಾತ್ರೆಗೆ ಸಂಬಂಧಿಸಿದ ಮೊಕದ್ದಮೆಯ ವಿಚಾರಣೆ 14ನೇ ತಾರೀಖು ನಡೆಯಲಿದೆ.
ನಾಳೆ ಪಾದಯಾತ್ರೆ ಮಾಡಲು ತೊಂದರೆ ಇಲ್ಲ. ಹೀಗಾಗಿ ನಾಳೆ ಪಾದಯಾತ್ರೆ ಮಾಡುತ್ತೇವೆ. ಒಂದು ವೇಳೆ ನ್ಯಾಯಾಲಯ ಪಾದಯಾತ್ರೆ ನಿಲ್ಲಿಸುವಂತೆ ಆದೇಶಿಸಿದರೆ ಅದನ್ನು ಗೌರವಿಸಿ, ಪಾಲಿಸುತ್ತೇವೆ ಎಂದು ಹೇಳಿದ್ದಾರೆ.