Publish Date: Mon, 10 Jan 2022 (07:39 IST)
Updated Date: Mon, 10 Jan 2022 (00:41 IST)
ಹಾಸನ : ರಾಜ್ಯದಲ್ಲಿ ಕೊರೊನಾ ಹೆಚ್ಚಾದ ಹಿನ್ನೆಲೆ ಈಗಾಗಲೇ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಈ ಮಧ್ಯೆ ಹಾಸನದ 24 ಜನ ಪೊಲೀಸರಿಗೆ ಕೊರೊನಾ ದೃಢಪಟ್ಟಿದೆ. ಓರ್ವ ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ಹಾಗೂ ಪೊಲೀಸ್ ಸಿಬ್ಬಂದಿ ಸೇರಿ ಒಟ್ಟು 24 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುವ ಇಬ್ಬರಿಗೆ, ಟ್ರಾಫಿಕ್ ಪೊಲೀಸ್ ಠಾಣೆ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿರುವ ಪೊಲೀಸರಿಗೆ ಕೊರೊನಾ ಬಂದಿದೆ.