ಬೆಂಗಳೂರು : ಇಂದಿನಿಂದ ಎರಡನೇ ವಾರದ ವೀಕೆಂಡ್ ಕರ್ಫ್ಯೂ ಜಾರಿ ವಿಚಾರವಾಗಿ ಮಾತನಾಡಿ, ಈ ತಿಂಗಳು ನಿಯಮ ಮುಂದುವರೆಯುತ್ತದೆ.
ಇವತ್ತು ಎರಡನೇ ವೀಕೆಂಡ್ ಕರ್ಫ್ಯೂ ಜಾರಿ ಆಗಲಿದೆ. ಜನ ಸಹಕಾರ ನೀಡಬೇಕು. ಅನೇಕ ಜಿಲ್ಲೆಗಳಲ್ಲಿ ಸೋಂಕು ಹೆಚ್ಚುತ್ತಿದೆ. ಯಾರು ಕೂಡ ಉದಾಸೀನ ಮಾಡಬಾರದು. ರಾಜ್ಯದಲ್ಲಿ ಕೊರೊನಾ ಇನ್ನು ಪೀಕ್ಗೆ ಹೋಗಿಲ್ಲ. ತಜ್ಞರು ಕೂಡಾ ಇದನ್ನ ಹೇಳಿದ್ದಾರೆ.
ಹೆಚ್ಚು ಸೋಂಕು ಇರುವ ಜಿಲ್ಲಾಡಳಿತಗಳ ಜೊತೆ ಇಂದು ಸಭೆ ಮಾಡುತ್ತೇನೆ. ಮೋದಿ ಅವರು ಕೊಟ್ಟ ಸಲಹೆಗಳನ್ನು ಅನುಷ್ಠಾನ ಮಾಡುತ್ತೇವೆ ಎಂದು ಹೇಳಿದ್ದಾರೆ.
ಕಳೆದ ವಾರದಿಂದ ವೀಕೆಂಡ್ ಲಾಕ್ ಮಾಡಿದ್ದೇವೆ. 7 ದಿನಕ್ಕೆ ಸೋಂಕು ಕಡಿಮೆ ಆಗುವುದಿಲ್ಲ. ಮೊದಲ ಎರಡು ಅಲೆಯಲ್ಲಿ 14 ದಿನಗಳ ಚೈನ್ ಇತ್ತು. ಆದರೆ ಈ ಅಲೆಯಲ್ಲಿ ಸ್ವಲ್ಪ ಕಡಿಮೆ ಇದೆ. ಈ ಸೋಂಕು 5-6 ಪಟ್ಟು ವೇಗವಾಗಿ ಹರಡುತ್ತಿದೆ. ಹೀಗಾಗಿ ಇನ್ನೂ ಸ್ವಲ್ಪ ದಿನ ಹೋದರೆ ವೀಕೆಂಡ್ ಕರ್ಫ್ಯೂ ಫಲಿತಾಂಶ ಸಿಗಬಹುದು ಎಂದಿದ್ದಾರೆ.