Select Your Language

Notifications

webdunia
webdunia
webdunia
webdunia

ಕೊಳ್ಳೆಗಾಲದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದೇನು?

ಕೊಳ್ಳೆಗಾಲದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದೇನು?
ಕೊಳ್ಳೆಗಾಲ , ಭಾನುವಾರ, 1 ಜುಲೈ 2018 (16:46 IST)
ರಾಜ್ಯದ ಮಾಜಿ ಸಚಿವ ಹಾಗೂ ಕಾಂಗ್ರೆಸ್‍ನ ಪ್ರಭಾವಿ ಶಾಸಕ ಸತೀಶ್ ಜಾರಕಿಹೊಳಿ ಕೊಳ್ಳೆಗಾಲದಲ್ಲಿ ರಾಜ್ಯ ಸರಕಾರದ ಅಳಿವು- ಉಳಿವಿನ ಬಗ್ಗೆ ಹೇಳಿಕೆ ನೀಡಿದ್ದಾರೆ. 
 
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಈಗಿನ ಸಮ್ಮಿಶ್ರ ಸರಕಾರದಲ್ಲಿ ನಿರ್ಲಕ್ಷ್ಯ ಮಾಡುವುದಕ್ಕೆ ಸಾಧ್ಯವೇ ಇಲ್ಲ. ಸಿದ್ದರಾಮಯ್ಯನವರ ಮಾರ್ಗದರ್ಶನದಲ್ಲಿ ಸರಕಾರ ನಡೆಯುತ್ತದೆ. ಸಮ್ಮಿಶ್ರ ಸರಕಾರ ಐದು ವರ್ಷಗಳ ಆಡಳಿತವನ್ನು ಪೂರ್ಣಗೊಳಿಸುತ್ತದೆ. ಜನತೆಗೆ ಒಳ್ಳೆಯ ಆಡಳಿತವನ್ನೂ ನೀಡುತ್ತದೆ. ಸರಕಾರದ ಸ್ಥಿರತೆ ಬಗ್ಗೆ ಯಾವುದೇ ಸಂಶಯ ಬೇಡ ಎಂದಿದ್ದಾರೆ. 
 
ಎರಡು ವರ್ಷಗಳ ಬಳಿಕ ಸಂಪುಟ ಸೇರ್ಪಡೆ ಮಾಡಿಕೊಳ್ಳುವ ಆಶ್ವಾಸನೆಯನ್ನು ವರಿಷ್ಠರು ನೀಡಿದ್ದಾರೆ. ಅಲ್ಲಿಯವರೆಗೂ ನಮ್ಮ ಸಹಕಾರ ಸರಕಾರಕ್ಕೆ ಇದ್ದೇ ಇರುತ್ತದೆ. ಬೇರೆ ಪಕ್ಷ ಸೇರುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. 
 
 
 

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಥಮ ಅಂಚೆ ಕನ್ನಡ ಸಾಹಿತ್ಯ ಸಮ್ಮೇಳನ