Publish Date: Fri, 28 Jan 2022 (06:33 IST)
Updated Date: Thu, 27 Jan 2022 (22:36 IST)
ಬೆಂಗಳೂರು : ವಿಧಾನಮಂಡಲದ ಜಂಟಿ ಅಧಿವೇಶನ ಫೆ. 14 ರಿಂದ 25ರವರೆಗೆ ಹಾಗೂ ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಅಧಿವೇಶನವನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಸಚಿವ ಸಂಪುಟ ಸಭೆಯ ನಂತರ ಮಾಧ್ಯಮದವರಿಗೆ ಸಿಎಂ ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟದ ಸಭೆಯ ನಂತರ ಹಲವಾರು ವಿಷಯಗಳನ್ನು ಚರ್ಚಿಸಲಾಗಿದೆ.
ಕೋವಿಡ್ ಸ್ಥಿತಿಗತಿ, ಕೋವಿಡ್ ನಿರ್ವಹಣೆ, ಶಾಲಾ-ಕಾಲೇಜು ಹಾಗೂ ಸಂಘ ಸಂಸ್ಥೆಗಳ ಮನವಿಗಳನ್ನು ತಜ್ಞರ ಸಮಿತಿಯ ಮುಂದೆ ಇರಿಸಲಾಗಿದ್ದು, ತಜ್ಞರ ವರದಿ ಬಂದ ನಂತರ ಸೂಕ್ತ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.