Select Your Language

Notifications

webdunia
webdunia
webdunia
webdunia

ಇಂದು ಕೊರೊನಾಗೆ ಬಲಿಯಾದ ಸಂಖ್ಯೆ ಎಷ್ಟು?

ಇಂದು ಕೊರೊನಾಗೆ ಬಲಿಯಾದ ಸಂಖ್ಯೆ ಎಷ್ಟು?
ಬೆಂಗಳೂರು , ಭಾನುವಾರ, 30 ಜನವರಿ 2022 (14:50 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು,
 
ಕಳೆದ ಮೂರು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪುವವರ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಕಳೆದ 24 ಗಂಟೆಯಲ್ಲಿ 28,264 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 37,85,295ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಮಹಾಮಾರಿ ಕೊರೊನಾದಿಂದ ಇಂದು 68 ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38,942ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 11,938 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,10,198ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೊನಾದಿಂದ 14 ಸೋಂಕಿತರು ಮೃತಪಟ್ಟಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

12 ದಿನ ಬ್ಯಾಂಕುಗಳಿಗೆ ರಜೆ!