Webdunia - Bharat's app for daily news and videos

Install App

ಸುಪ್ರೀಂಕೋರ್ಟನ ತೀರ್ಪಾದ್ರು ಏನು?

ಕೊರೋನಾದಿಂದ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ನೀಡಲು ಮಾರ್ಗಸೂಚಿ ಸಿದ್ಧಮಾಡಲು ಸುಪ್ರೀಂಕೋರ್ಟ್ ಆದೇಶ

Webdunia
ಗುರುವಾರ, 1 ಜುಲೈ 2021 (07:34 IST)
ನವದೆಹಲಿ: ಕೋವಿಡ್ಗೆ ಬಲಿಯಾದ ವ್ಯಕ್ತಿಗಳ ಕುಟುಂಬ ಸದಸ್ಯರಿಗೆ ಕೃಪಾನುದಾನ ನೀಡುವ ಸಂಬಂಧ ಮಾರ್ಗಸೂಚಿ ರೂಪಿಸುವಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ (ಎನ್ಡಿಎಂಎ) ಸುಪ್ರೀಂಕೋರ್ಟ್ ಬುಧವಾರ ಆದೇಶಿಸಿದೆ. ಕೃಪಾನುದಾನದ ಮೊತ್ತ ಎಷ್ಟು ಇರಬೇಕು ಎಂದು ನಿರ್ಧರಿಸುವುದು ಎನ್ಡಿಎಂಎಗೆ ಬಿಟ್ಟದ್ದು ಎಂದು ನ್ಯಾಯಾಲಯ ಇದೇ ಸಂದರ್ಭದಲ್ಲಿ ತಿಳಿಸಿತು.

ಅಲ್ಲದೆ ಮಾರ್ಗಸೂಚಿಗಳನ್ನು 6 ತಿಂಗಳೊಳಗೆ ಜಾರಿಗೆ ತರಬೇಕು ಎಂದು ಕೂಡ ಅದು ಸೂಚಿಸಿತು.ವಿಪತ್ತು ನಿರ್ವಹಣಾ ಕಾಯಿದೆಯ ಸೆಕ್ಷನ್ 12ರ ಅಡಿ ಕೃಪಾನುದಾನ ಒದಗಿಸುವುದು ಸೇರಿದಂತೆ ಕನಿಷ್ಠ ಮಾನದಂಡಗಳ ಪರಿಹಾರಕ್ಕಾಗಿ ಮಾರ್ಗಸೂಚಿ ರೂಪಿಸುವುದು ಕಡ್ಡಾಯವಾಗಿದೆ ಮತ್ತು ಅದು ವಿವೇಚನಾಧಿಕಾರವಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು. ಅದನ್ನು ಮಾಡಲು ವಿಫಲವಾದಾಗ ಕಾಯಿದೆಯ ಸೆಕ್ಷನ್ 12 ರ ಅಡಿಯಲ್ಲಿ ತನ್ನ ಕೆಲಸ ನಿರ್ವಹಿಸಲು ವಿಪತ್ತು ಪ್ರಾಧಿಕಾರ ವಿಫಲವಾದಂತೆ ಎಂದು ನ್ಯಾಯಾಲಯ ಹೇಳಿದೆ.  ಮರಣ ಪ್ರಮಾಣ ಪತ್ರಗಳಲ್ಲಿ ಸಾವಿನ ದಿನಾಂಕ ಮತ್ತು ಕಾರಣವನ್ನು (ಕೋವಿಡ್ನಿಂದ ಆದದ್ದು ಎಂದು) ನಮೂದಿಸಬೇಕು ಎಂದು ಕೂಡ ನ್ಯಾಯಾಲಯ ಸೂಚಿಸಿದೆ. ಕುಟುಂಬಸ್ಥರಿಗೆ ತೃಪ್ತಿ ಇಲ್ಲದಿದ್ದರೆ ಸಾವಿನ ಕಾರಣವನ್ನು ಸರಿಪಡಿಸುವ ಸೌಲಭ್ಯವೂ ಇರುತ್ತದೆ ಎಂದು ನ್ಯಾಯಾಲಯ ಹೇಳಿದೆ.   ಕೋವಿಡ್ ರೋಗದಿಂದ ಸಾವನ್ನಪ್ಪಿದವರು ಮತ್ತು ಮ್ಯುಕೊರ್ಮೈಕೋಸಿಸ್ ಸೇರಿದಂತೆ ಕೊರೊನೋತ್ತರ ಬಿಕ್ಕಟ್ಟಿನಿಂದ ತೊಂದರೆ ಅನುಭವಿಸಿದ ಕುಟುಂಬ ಸದಸ್ಯರಿಗೆ ರೂ 4 ಲಕ್ಷ ಕೃಪಾನುದಾನ ನೀಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎಂ ಆರ್ ಶಾ ಅವರ ನೇತೃತ್ವದ ಪೀಠ ಈ ತೀರ್ಪು ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments