ಬೆಂಗಳೂರು : ಸೌತ್ ಆಫ್ರಿಕಾ , ಹಾಂಕಾಂಗ್ ದೇಶದಲ್ಲಿ ವೈರಸ್ ಪತ್ತೆಯಾಗಿರುವ ಹಿನ್ನೆಲೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು,
ಅಂತರ್ ರಾಜ್ಯ ಮತ್ತು ವಿದೇಶಿ ಪ್ರಯಾಣಿಕರ ಮೇಲೆ ಗಮನ ಇರಿಸುವಂತೆ ಸೂಚನೆ ನೀಡಿದೆ. ದೇಶಗಳಲ್ಲಿ ಕಳೆದೊಂದು ವಾರದಿಂದ ಕೋವಿಡ್ ಹೊಸ ರೂಪಾಂತರಿ ವೈರಾಣು ಕಾಣಿಸಿಕೊಂಡಿದೆ. ಆದರೆ ರಾಜ್ಯದಲ್ಲಿ ಎಲ್ಲೂ ಇದು ಕಂಡು ಬಂದಿಲ್ಲ.