ಮೈಸೂರು : ಧರ್ಮದ ಮುಖವಾಡದಲ್ಲಿ ಅಧರ್ಮ ಕುಣಿದು ಕುಪ್ಪಳಿಸುತ್ತಿದೆ.
ಜನ ಸಮುದಾಯದ ವಿವೇಕ ಕಡಿಮೆಯಾಗುತ್ತಿದೆ. ಪ್ರಾಣಿ ವಧೆ ಮಾಡಿ ತಿನ್ನುವುದರಲ್ಲಿ ಮಾನವೀಯತೆ ಎಲ್ಲಿಂದ ಬಂತು ಎಂದು ಹಿರಿಯ ಸಾಹಿತಿ ದೇವನೂರು ಮಹಾದೇವ ಹಲಾಲ್ ವಿವಾದದ ಕುರಿತು ಪ್ರಶ್ನಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಸಾಹಿತಿ, ಕಾನೂನು ಹಾಗೂ ಸುವ್ಯವಸ್ಥೆ ಇದೆ ಎಂದಾದರೆ ಸರ್ಕಾರ ಇಂತಹ ವಿಚಾರವಾಗಿ ಕ್ರಮ ತೆಗೆದುಕೊಳ್ಳಬೇಕಿತ್ತು. ಆದರೆ ಸರ್ಕಾರ ಈ ಬಗ್ಗೆ ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು.
ಸರ್ಕಾರ ಜನ ಸಮುದಾಯವನ್ನು ಒಡೆದು ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ. ವಿರೋಧ ಪಕ್ಷಗಳು ಇದನ್ನೆಲ್ಲಾ ನೋಡಿಕೊಂಡು ಮಂಕಾಗಿ ಕೂತಿದೆ.