Publish Date: Thu, 17 May 2018 (08:51 IST)
Updated Date: Thu, 17 May 2018 (08:52 IST)
ಬೆಂಗಳೂರು: ಆಪರೇಷನ್ ಕಮಲದ ಭೀತಿಯಿಂದ ಯಾರ ಕೈಗೂ ಸಿಗದಂತೆ ಕಾಂಗ್ರೆಸ್ ಶಾಸಕರು ರೆಸಾರ್ಟ್ ಸೇರಿಕೊಂಡಿದ್ದಾರೆ.
ಬಿಜೆಪಿ ಕಾಂಗ್ರೆಸ್ ಶಾಸಕರನ್ನು ಸೆಳೆದು ಸರ್ಕಾರ ರಚಿಸಲು ಮುಂದಾಗಬಹುದು ಎಂಬ ಕಾರಣಕ್ಕೆ ಕಾಂಗ್ರೆಸ್ ನ ಎಲ್ಲಾ ಶಾಸಕರನ್ನು ನಿನ್ನೆ ಕೆಪಿಸಿಸಿ ಕಚೇರಿಯಿಂದ ನೇರವಾಗಿ ಬಿಡದಿ ಬಳಿಯ ಈಗಲ್ಟನ್ ರೆಸಾರ್ಟ್ ಗೆ ಕರೆದೊಯ್ಯಲಾಯಿತು.
ಬಸ್ ಮೂಲಕ ಶಾಸಕರನ್ನು ರೆಸಾರ್ಟ್ ಗೆ ಬಿಗಿ ಭದ್ರತೆಯಲ್ಲಿ ಕರೆದೊಯ್ಯಲಾಯಿತು. ಇದೀಗ ಈಗಲ್ಟನ್ ರೆಸಾರ್ಟ್ ನಲ್ಲಿ ಕಾಲ ಕಳೆಯುತ್ತಿರುವ ಶಾಸಕರನ್ನು ಯಾರೂ ಸಂಪರ್ಕಿಸದಂತೆ ನೋಡಿಕೊಳ್ಳಲಾಗುತ್ತಿದೆ. ರೆಸಾರ್ಟ್ ಸುತ್ತಮುತ್ತ ಬ್ಯಾರಿ ಕ್ಯಾಡ್ ಗಳನ್ನು ಹಾಕಿ ಪೊಲೀಸರು ಬಿಗಿ ಭದ್ರತೆ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.