Select Your Language

Notifications

webdunia
webdunia
webdunia
webdunia

ಇಂದು ಎಲ್ಲೆಲ್ಲಿ ಮಳೆ?

ಇಂದು ಎಲ್ಲೆಲ್ಲಿ ಮಳೆ?
ನವದೆಹಲಿ , ಬುಧವಾರ, 1 ಡಿಸೆಂಬರ್ 2021 (10:18 IST)
ಇಂದಿನಿಂದ 4 ದಿನ ಕರ್ನಾಟಕದಲ್ಲಿ ಮಳೆ ಮುಂದುವರೆಯಲಿದೆ.
ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂದು ಮಳೆ ಅಬ್ಬರಿಸಲಿದೆ. ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಗುಜರಾತ್ನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಕೊಂಕಣ, ಗೋವಾ ಮತ್ತು ಮಧ್ಯ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಿದೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಗುಜರಾತ್‌ನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಸೌರಾಷ್ಟ್ರ, ಕಚ್, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಆಂಧ್ರಪ್ರದೇಶದ ಕರಾವಳಿ, ಯಾನಂ, ರಾಯಲಸೀಮಾ, ತಮಿಳುನಾಡು, ಪುದುಚೇರಿ, ಕಾರೈಕಲ್, ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರಾಖಂಡ, ಹಿಮಾಚಲ ಪ್ರದೇಶ, ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ಮರಾಠವಾಡ ಮತ್ತು ಕರ್ನಾಟಕದ ಉತ್ತರ ಒಳಭಾಗದಲ್ಲಿ ಗುಡುಗು ಸಹಿತ ಪ್ರತ್ಯೇಕ ಮಳೆಯಾಗುವ ಸಾಧ್ಯತೆಯಿದೆ.
ಗುಜರಾತ್ನ ಉತ್ತರ ಮತ್ತು ದಕ್ಷಿಣ ಕರಾವಳಿ ತೀರದಲ್ಲಿ ನವೆಂಬರ್ ಇಂದಿನಿಂದ ಡಿಸೆಂಬರ್ 2ರವರೆಗೂ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ಈ ಅಕಾಲಿಕ ಮಳೆಯಿಂದ ರೈತರ ಬೆಳೆಗಳಿಗೆ ತೊಂದರೆಯಾಗಲಿದೆ ಮತ್ತು ಕಟಾವು ಮಾಡಲೂ ಕಷ್ಟವಾಗಲಿದೆ ಎಂದು ಹೇಳಲಾಗಿದೆ. ಇಂದು ಮತ್ತು ನಾಳೆ ಗುಜರಾತ್ನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಮ್ರೇಲಿ, ಜುನಾಗಢ್, ಗಿರ್ ಸೋಮನಾಥ್, ಬೊಟಾಡ್ ಮತ್ತು ಭಾವನಗರ ಸೇರಿದಂತೆ ಸೌರಾಷ್ಟ್ರ ಜಿಲ್ಲೆಗಳ ಆನಂದ್, ಭರೂಚ್, ನವಸಾರಿ, ವಲ್ಸಾದ್ ಸೂರತ್, ಡ್ಯಾಂಗ್ಸ್ ಮತ್ತು ತಾಪಿಯಲ್ಲಿ ಪಂಚಮಹಲ್, ದಾಹೋದ್, ಛೋಟಾ ಉದೇಪುರ್ ಸೇರಿದಂತೆ ಹಲವೆಡೆ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಐಎಂಡಿ ತಿಳಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಒಮಿಕ್ರಾನ್ ಆತಂಕ; ಇಂದಿನಿಂದ ಏರ್​ಪೋರ್ಟ್​ಗಳಲ್ಲಿ ಮಾರ್ಗಸೂಚಿ ಜಾರಿ