Webdunia - Bharat's app for daily news and videos

Install App

ರಾಷ್ಟ್ರಪತಿ ಚುನಾವಣೆಯಲ್ಲಿ ಗೆಲುವು ಯಾರಿಗೆ?

Webdunia
ಶುಕ್ರವಾರ, 11 ಮಾರ್ಚ್ 2022 (12:07 IST)
ನವದೆಹಲಿ : ಉತ್ತರ ಪ್ರದೇಶದಲ್ಲಿ ಗೆಲುವು ಸಾಧಿಸಿದ್ದರಿಂದ ಈ ಬಾರಿಯ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸುಲಭವಾಗಿ ಗೆಲುವು ಸಾಧಿಸಲಿದ್ದಾರೆ.
 
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಜು.24ಕ್ಕೆ ಅಂತ್ಯಗೊಳ್ಳಲಿದೆ. 75 ವರ್ಷ ಮೇಲ್ಪಟ್ಟವರಿಗೆ ಪಕ್ಷದಿಂದ ನಿವೃತ್ತಿ ನೀಡುವ ಹಿನ್ನೆಲೆಯಲ್ಲಿ 76 ವರ್ಷದ ಕೋವಿಂದ್ ಅವರನ್ನು ಎರಡನೇ ಬಾರಿ ಆಯ್ಕೆ ಮಾಡುವುದು ಅನುಮಾನ. ರಾಷ್ಟ್ರಪತಿ ಚುನಾವಣೆಯನ್ನು ಗೆಲ್ಲಬೇಕಾದರೆ ಉತ್ತರ ಪ್ರದೇಶದ ಗೆಲುವು ಬಿಜೆಪಿಗೆ ಅನಿವಾರ್ಯವಾಗಿತ್ತು.

ರಾಷ್ಟ್ರಪತಿ ಚುನಾವಣೆಯಲ್ಲಿ ಲೋಕಸಭೆ ಸದಸ್ಯರು, ರಾಜ್ಯಸಭೆ ಸದಸ್ಯರು, ರಾಜ್ಯ ವಿಧಾನಸಭೆಗಳ ಸದಸ್ಯರು ಮತ್ತು ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭೆ ಸದಸ್ಯರು ಮತ ಹಾಕುತ್ತಾರೆ. ವಿಧಾನಪರಿಷತ್ ಸದಸ್ಯರಿಗೆ ಮತ ಇಲ್ಲ.

543 ಲೋಕಸಭಾ ಸದಸ್ಯರು, 233 ರಾಜ್ಯಸಭಾ ಸದಸ್ಯರು ಮತ್ತು ದೇಶದ ವಿಧಾನಸಭೆಯಲ್ಲಿರುವ 4,120 ಶಾಸಕರು ಮತ ಹಾಕಲಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ಒಟ್ಟು 10,98,903 ಮತಗಳು ಚಲಾವಣೆಯಾಗುತ್ತವೆ. ಶೇ.50ಕ್ಕಿಂತ ಹೆಚ್ಚು ಮತ ಪಡೆದ ಅಭ್ಯರ್ಥಿ ಜಯಗಳಿಸುತ್ತಾರೆ. 

ಎಲ್ಲ ಸಂಸದರ ವೋಟಿನ ಮೌಲ್ಯ 708. ರಾಜ್ಯದ ಜನಸಂಖ್ಯೆಯ ಆಧಾರದ ಮೇಲೆ ಶಾಸಕನ ಮತವನ್ನು ಲೆಕ್ಕಾಚಾರ ಮಾಡಲಾಗುತ್ತದೆ. ಉತ್ತರ ಪ್ರದೇಶದ ಒಬ್ಬ ಶಾಸಕನ ಮತಕ್ಕೆ ದೇಶದಲ್ಲೇ ಅತಿಹೆಚ್ಚು ಮೌಲ್ಯ 208 ಇದೆ. ದೇಶದಲ್ಲೇ ಕಡಿಮೆ ಇರುವ ಸಿಕ್ಕಿಂ ರಾಜ್ಯದ ಒಬ್ಬ ಶಾಸಕನ ಮತದ ಮೌಲ್ಯ 7 ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments