Publish Date: Sun, 10 Jun 2018 (13:49 IST)
Updated Date: Sun, 10 Jun 2018 (13:52 IST)
ಮುಂಬೈ : ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ಕಳೆದ ನಾಲ್ಕು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಸಮರ್ಥವಾಗಿ ಸಂಪರ್ಕ ಅಭಿಯಾನ ಆಯೋಜಿಸಲಾಗಿದೆ. ಆದಕಾರಣ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮುಂಬೈನ ಗ್ಯಾಲಕ್ಸಿ ಅಪಾರ್ಟ್ ಮೆಂಟ್ ನಲ್ಲಿರುವ ಸಲ್ಮಾನ್ ಖಾನ್ ಅವರ ನಿವಾಸಕ್ಕೆ ಭೇಟಿ ನೀಡಿ ನಟ ಸಲ್ಮಾನ್ ಖಾನ್ ಹಾಗೂ ಅವರ ತಂದೆ ಸಲೀಮ್ ಖಾನ್ ಜೊತೆ ಕೆಲವು ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ. ಹಾಗೇ ಮೋದಿ ಸರ್ಕಾರ ಜನರಿಗೆ ನೀಡಿದ್ದ ಆಶ್ವಾಸನೆ ಈಡೇರಿಸುವ ಬಗ್ಗೆ ಮಾಹಿತಿ ಪುಸ್ತಕವನ್ನು ಸಲ್ಮಾನ್ ಅವರಿಗೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ