Select Your Language

Notifications

webdunia
webdunia
webdunia
webdunia

ತಮಿಳುನಾಡಲ್ಲಿ ಸರ್ಕಾರಿ ನೌಕರಿಗೆ ತಮಿಳು ಕಡ್ಡಾಯ ಯಾಕೆ?

ತಮಿಳುನಾಡಲ್ಲಿ ಸರ್ಕಾರಿ ನೌಕರಿಗೆ ತಮಿಳು ಕಡ್ಡಾಯ ಯಾಕೆ?
ತಮಿಳುನಾಡು , ಭಾನುವಾರ, 5 ಡಿಸೆಂಬರ್ 2021 (10:59 IST)
ಚೆನ್ನೈ : ಸರ್ಕಾರಿ ನೌಕರಿಗೆ ಸೇರಬೇಕೆಂದರೆ ಇನ್ನುಮುಂದೆ ತಮಿಳು ಭಾಷಾ ವಿಷಯದ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.
ರಾಜ್ಯದ ಸರ್ಕಾರಿ ನೌಕರರಿಗೆ ತಮಿಳು ಜ್ಞಾನ ಇರಬೇಕು, ಜನರಿಗೆ ಮಾತೃಭಾಷೆಯಲ್ಲಿ ಸರ್ಕಾರಿ ಸೇವೆಗಳು ದೊರಕಬೇಕು ಮತ್ತು ತಮಿಳು ಭಾಷಿಕರಿಗೇ ಸ್ಥಳೀಯ ಉದ್ಯೋಗಗಳು ಸಿಗಬೇಕು ಎಂಬ ಉದ್ದೇಶದೊಂದಿಗೆ ತಮಿಳುನಾಡು ಸರ್ಕಾರ ಎಲ್ಲ ಸರ್ಕಾರಿ ನೌಕರರಿಗೆ ತಮಿಳು ಭಾಷೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಹಾಗೂ ರಾಜ್ಯ ಸರ್ಕಾರಿ ಸ್ವಾಮ್ಯದ ಉದ್ದಿಮೆಗಳಿಗೆ ನೇಮಕಾತಿ ಮಾಡಿಕೊಳ್ಳಲು ತಮಿಳುನಾಡು ಲೋಕಸೇವಾ ಆಯೋಗ (ಟಿಎನ್ಪಿಎಸ್ಸಿ) ನಡೆಸುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ 10 ನೇ ತರಗತಿಯ ತಮಿಲೂ ಪರೀಕ್ಷೆಗಳಲ್ಲಿ ಇನ್ನುಮುಂದೆ ಪ್ರಶ್ನೆಪತ್ರಿಕೆ ಇರುತ್ತದೆ.
 ಅದರಲ್ಲಿ ಕನಿಷ್ಟ 40 ಅಂಕಗಳನ್ನು ಪಡೆದು ಉತ್ತೀರ್ಣರಾದರೆ ಮಾತ್ರ ಅಭ್ಯರ್ಥಿಯು ಟಿಎನ್ಪಿಎಸ್ಸಿ ಪರೀಕ್ಷೆಯಲ್ಲಿ ಬರೆದ ಇನ್ನಿತರ ವಿಷಯಗಳ ಉತ್ತರ ಪತ್ರಿಕೆಗಳನ್ನು ಮೌಲ್ಯ ಮಾಪನ ಮಾಡಲಾಗುತ್ತದೆ . ಈ ನಿಯಮ ತಕ್ಷಣ ದಿಂದಲೇ ಜಾರಿಗೆ ಬರಲಿದೆ. ಡಿ.1ರಂದು ಹೊರಡಿಸಿರುವ ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ !