Publish Date: Wed, 10 Nov 2021 (07:02 IST)
Updated Date: Wed, 10 Nov 2021 (07:41 IST)
ಬೆಂಗಳೂರು : ಇಂದು ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ತುಂತುರು ಇಲ್ಲವೇ ಹಗುರ ಮಳೆ ಆಗಲಿದೆ.
ನಂತರ ಹಿಂಗಾರು ತುಸು ಚುರುಕಾಗಲಿದ್ದು, ನ. 11ರಂದು ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯಲಿದೆ. ಬೆಂಗಳೂರು ನಗರ ಜಿಲ್ಲೆಗೆ ಇಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.
ಕರ್ನಾಟಕದ 13 ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಭಾರೀ ಮಳೆಯಾಗುವುದರಿಂದ ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ ಮಳೆ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಆಗಾಗ ಸುರಿದ ಮಳೆ ನ. 12ರವರೆಗೆ ಮುಂದುವರಿಯಲಿದೆ. ಇಂದು ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ತುಂತುರು ಇಲ್ಲವೇ ಹಗುರ ಮಳೆ ಆಗಲಿದೆ. ನಂತರ ಹಿಂಗಾರು ತುಸು ಚುರುಕಾಗಲಿದ್ದು, ನ. 11ರಂದು ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯಲಿದೆ. ಬೆಂಗಳೂರು ನಗರ ಜಿಲ್ಲೆಗೆ ಇಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.