Publish Date: Sat, 24 Mar 2018 (13:01 IST)
Updated Date: Sat, 24 Mar 2018 (13:33 IST)
ಹಾಸನ : ಬೇಲೂರು ಕಾಂಗ್ರೆಸ್ ಶಾಸಕ ವೈಎನ್ ರುದ್ರೇಶ್ ಗೌಡ ಅವರು ವಿಕ್ರಂ ಆಸ್ಪತ್ರೆಯಲ್ಲಿ ಶನಿವಾರ (ಇಂದು) ಕೊನೆಯುಸಿರೆಳೆದಿದ್ದಾರೆ.
ಉಸಿರಾಟದ ತೊಂದರೆ ಹಾಗೂ ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ವೈಎನ್ ರುದ್ರೇಶ್ ಗೌಡರು ಬೆಂಗಳೂರಿನ ವಿಕ್ರಂ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಶಾಸಕರ ನಿಧನದಿಂದ ಸ್ವಕ್ಷೇತ್ರ ಬೇಲೂರಿನಲ್ಲಿ ಮೌನ ಮಡುಗಟ್ಟಿದ್ದು, ಅಂತಿಮ ದರ್ಶನಕ್ಕಾಗಿ ಬೇಲೂರಿನ ಕಾಲೇಜು ಮೈದಾನದಲ್ಲಿ ಸಿದ್ಧತೆ ಮಾಡಲಾಗಿದೆ. ಈಗಾಗಲೇ ಶಾಸಕರ ಕುಟುಂಬ ಸದಸ್ಯರು ಬೆಂಗಳೂರಿಗೆ ಆಗಮಿಸಿದ್ದು, ಸಂಜೆ ವೇಳೆಗೆ ಮೃತದೇಹ ಹಾಸನಕ್ಕೆ ಬರುವ ಸಾಧ್ಯತೆ ಇದೆ ಎಂಬುದಾಗಿ ತಿಳಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ