Publish Date: Tue, 24 Apr 2018 (13:18 IST)
Updated Date: Tue, 24 Apr 2018 (13:20 IST)
ಬಿ.ಎಸ್ ಯಡಿಯೂರಪ್ಪನವರು ಐತಿಹಾಸಿಕ ನಿರ್ಣಯವನ್ನ ಕೈಗೊಂಡಿದ್ದಾರೆ. ಬಿಜೆಪಿ ಪಕ್ಷ ಯಡಿಯೂರಪ್ಪನವರ ಪರವಾಗಿದೆ. ವಿಜೇಂದ್ರ ಮುಂದಿನ ದಿನಗಳಲ್ಲಿ ಪಕ್ಷದ ಪರವಾಗಿ ಕೆಲಸ ಮಾಡುತ್ತಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮತ್ತು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಮೈಸೂರಿನಲ್ಲಿ ಹೇಳಿಕೆ ನೀಡಿದರು.
ನಗರದ ಖಾಸಗಿ ಹೋಟೆಲ್ ನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ರಾಜ್ಯ ಬಿಜೆಪಿ ಉಸ್ತುವಾರಿ ಮತ್ತು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್, ನಮ್ಮ ಮುಂದಿನ ಮುಖ್ಯಮಂತ್ರಿಗಳು ಬಿ.ಎಸ್. ಯಡಿಯೂರಪ್ಪನವರು ಐತಿಹಾಸಿಕ ನಿರ್ಣಯವನ್ನ ಪ್ರಕಟಿಸಿದ್ದಾರೆ.
ಬಿಜೆಪಿ ಪಕ್ಷ ಯಡಿಯೂರಪ್ಪನವರ ಪರವಾಗಿದೆ. ವಿಜಯೇಂದ್ರ ಅವರು ಪಕ್ಷದ ಪರವಾಗಿ ಕೆಲಸ ಮಾಡುತ್ತಾರೆ. ಪಕ್ಷ ಅವರಿಗೆ ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದರು.