Select Your Language

Notifications

webdunia
webdunia
webdunia
webdunia

ಸೋಲಿನಲ್ಲೂ ಯಡಿಯೂರಪ್ಪ ತೃಪ್ತಿ ಪಟ್ಟುಕೊಳ್ಳಲು ಕಾರಣ ಇದುವೇ!

ಸೋಲಿನಲ್ಲೂ ಯಡಿಯೂರಪ್ಪ ತೃಪ್ತಿ ಪಟ್ಟುಕೊಳ್ಳಲು ಕಾರಣ ಇದುವೇ!
ಬೆಂಗಳೂರು , ಗುರುವಾರ, 14 ಜೂನ್ 2018 (08:44 IST)
ಬೆಂಗಳೂರು: ಜಯನಗರ ವಿಧಾನಸಭೆ ಕ್ಷೇತ್ರದಲ್ಲಿ ತಮ್ಮ ಪಕ್ಷದ  ಅಭ್ಯರ್ಥಿ ಪ್ರಹ್ಲಾದ್ ಬಾಬು ಸೋತರೂ ಯಡಿಯೂರಪ್ಪ ತೃಪ್ತಿ ಪಟ್ಟುಕೊಂಡಿದ್ದಾರೆ. ಅದಕ್ಕೆ ಕಾರಣ ಇಲ್ಲಿದೆ ನೋಡಿ.

ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಬಾಬು ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಎದುರು ಕಡಿಮೆ ಮತಗಳ ಅಂತರದಿಂದ ಸೋಲುಂಡಿದ್ದಾರೆ. ಹಾಗಿದ್ದರೂ ನನಗೆ ನಿರಾಶೆಯಾಗಿಲ್ಲ ಎಂದು ಯಡಿಯೂರಪ್ಪ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.

‘ಜಯನಗರ ವಿಧಾನಸಭೆ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಪ್ರಹ್ಲಾದ್ ಬಾಬು 2886 ಮತಗಳ ಕಡಿಮೆ ಅಂತರದಿಂದ ಪರಾಭವಗೊಂಡಿದ್ದಾರೆ. ಕಳೆದ ಬಾರಿಗಿಂತಲೂ ಈ ಬಾರಿ ಈ ಕ್ಷೇತ್ರದಲ್ಲಿ ಬಿಜೆಪಿಗೆ 7000 ಮತಗಳು ಹೆಚ್ಚಿಗೆ ಬಂದಿವೆ. ಮತದಾರರ ತೀರ್ಪನ್ನು ನಾವು ಗೌರವಿಸುತ್ತೇವೆ. ಪಕ್ಷವನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದ’ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಆ ಮೂಲಕ ಸೋತರೂ ಕಡಿಮೆ ಅಂತರದಿಂದ ಸೋತಿದ್ದೇವೆ ಮತ್ತು ಕಳೆದ ಬಾರಿಗಿಂತ ಹೆಚ್ಚು ಮತ ಪಡೆದಿದ್ದೇವೆ ಎಂದು ತೃಪ್ತಿ ಪಟ್ಟುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿ ಫಿಟ್ನೆಸ್ ಚಾಲೆಂಜ್ ಗೆ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ?