Publish Date: Thu, 17 May 2018 (09:02 IST)
Updated Date: Thu, 17 May 2018 (09:04 IST)
ಬೆಂಗಳೂರು: ಇಂದು ಬೆಳಿಗ್ಗೆ 9 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜಭವನದಲ್ಲಿ ನಡೆದ ಕಾರ್ಯಕ್ರಮಕ್ಕೆ ಬಿಜೆಪಿಯ ಎಲ್ಲಾ ಶಾಸಕರು, ಕಾರ್ಯಕರ್ತರು ಸಾಕ್ಷಿಯಾದರು. ಹಸಿರು ಶಾಲು ಹೊದ್ದು ರೈತ ನಾಯಕನಾಗಿ ಯಡಿಯೂರಪ್ಪ ದೇವರ ಮತ್ತು ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಪಾಲ ವಜುಬಾಯಿ ವಾಲಾ, ಯಡಿಯೂರಪ್ಪಗೆ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.