Select Your Language

Notifications

webdunia
webdunia
webdunia
webdunia

ಮುಂದಿನ ವಾರ ಬರಗಾಲ ಘೋಷಣೆ ಮಾಡ್ತೀವಿ : ಸಿದ್ದರಾಮಯ್ಯ

ಮುಂದಿನ ವಾರ ಬರಗಾಲ ಘೋಷಣೆ ಮಾಡ್ತೀವಿ : ಸಿದ್ದರಾಮಯ್ಯ
ಬೆಂಗಳೂರು , ಭಾನುವಾರ, 10 ಸೆಪ್ಟಂಬರ್ 2023 (11:40 IST)
ಧಾರವಾಡ : ಕೇಂದ್ರ ಸರ್ಕಾರದ ನಿಯಮದಂತೆ ನಾವು ಬರಗಾಲ ಘೋಷಣೆ ಮಾಡಬೇಕು. ಮುಂದಿನ ವಾರ ಬರಗಾಲ ಘೋಷಣೆ ಮಾಡುತ್ತೇವೆ. ಕೇಂದ್ರದ ಸಹಾಯ ಕೇಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಮೇಳ ಉದ್ಘಾಟನೆ ಮಾಡಿ ಮಾತನಾಡಿದ ಅವರು, ರೈತರಿಗೆ ಕೃಷಿ ಉತ್ಪಾದನೆ ಆಗಬೇಕು. ರೈತರು, ಸೈನಿಕರು, ಶಿಕ್ಷಕರು ಬಹಳ ಮುಖ್ಯ. ಬಹಳ ಸಂತೋಷದಿಂದ ಧಾರವಾಡ ಕೃಷಿ ವಿವಿಯಲ್ಲಿ ಕೃಷಿ ಮೇಳವನ್ನು ನಾನು ನನ್ನ ಮಿತ್ರರು ಉದ್ಘಾಟನೆ ಮಾಡಿದ್ದೇವೆ.

ಕೃಷಿ ವಿವಿ ರೈತರಿಗೆ ಅನುಕೂಲ ಮಾಡುವ ಇಲಾಖೆ. 60% ಗೂ ಹೆಚ್ಚು ಜನಸಂಖ್ಯೆ ಕೃಷಿ ಮೇಲೆ ಅವಲಂಬನೆ ಆಗಿದೆ. ಕೃಷಿ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ. ರೈತರ ಆದಾಯ ಕೂಡಾ ಹೆಚ್ಚು ಆಗಲಿದೆ ಎಂದರು.

ಕೇಂದ್ರ ಹಾಗೂ ರಾಜ್ಯ ಎರಡು ಸರ್ಕಾರ ಕೂಡಾ ಕೃಷಿ ಅಭಿವೃದ್ಧಿ ಮಾಡಲು ಪ್ರಯತ್ನ ಮಾಡಬೇಕು. ನಮ್ಮದು ಕೃಷಿ ಪ್ರಧಾನ ದೇಶ ಎಂದು ಕರೆಯುತ್ತೇವೆ. ಕೆಲವರು ಕೃಷಿ ಬಿಡುತ್ತಿದ್ದಾರೆ. ಕೃಷಿ ಲಾಭದಾಯಕ ಅಲ್ಲ ಎಂದು ವಿಮುಖರಾಗುತ್ತಿದ್ದಾರೆ. ನಮ್ಮ ದೇಶದಲ್ಲಿ ಮಳೆಯಾಶ್ರಿತ ಬೇಸಾಯ ಹೆಚ್ಚು. ರಾಜಸ್ಥಾನ ಬಿಟ್ಟರೆ ನಾವೇ ಹೆಚ್ಚು. ಇದರಲ್ಲಿ ಕೃಷಿ ವಿವಿಗಳ ಪಾತ್ರ ಮುಖ್ಯ. ಒಣ ಬೇಸಾಯದ ಕಡೆ ಹೆಚ್ಚು ಗಮನ ಕೊಡಬೇಕಿರುವುದು ವಿವಿಗಳ ಕರ್ತವ್ಯ ಎಂದು ತಿಳಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಜಿ20 ಔತಣಕೂಟಕ್ಕೆ ಸಿರಿಧಾನ್ಯಗಳ ವೈವಿಧ್ಯತೆ : ಮೆನುವಿನಲ್ಲಿ ಏನೇನಿತ್ತು?