Publish Date: Sun, 01 Apr 2018 (14:58 IST)
Updated Date: Sun, 01 Apr 2018 (15:00 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ ಮಾಜಿ ಶಾಸಕರಾದ ಜಮೀರ್ ಅಹ್ಮದ್, ಚೆಲುವರಾಯ ಸ್ವಾಮಿ, ಚುನಾವಣೆ ಪ್ರಚಾರಕ್ಕಾಗಿ ತಮ್ಮ ಕ್ಷೇತ್ರಗಳಿಗೆ ಭೇಟಿ ಕೊಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಕಳೆದ ತಿಂಗಳು 25 ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಅಧಿಕೃತವಾಗಿ ಕೈ ಪಾಳೆಯ ಸೇರಿದ್ದ ಜೆಡಿಎಸ್ ಬಂಡಾಯ ಮಾಜಿ ಶಾಸಕರು ಇಂದು ಸಿದ್ದರಾಮಯ್ಯ ಅವರ ನಿವಾಸದಲ್ಲಿ ಭೇಟಿಯಾಗಿ ಚುನಾವಣೆಯಲ್ಲಿ ಸಾಥ್ ನಿಡಲು ಮನವಿ ಮಾಡಿದರು.
ಜೆಡಿಎಸ್ ಪಕ್ಷಕ್ಕೆ ಸೆಡ್ಡು ಹೊಡೆದು ಕೈ ಪಕ್ಷ ಸೇರಿರುವ ಮಾಜಿ ಶಾಸಕರು ಕಳೆದ ಕೆಲವು ದಿನಗಳಿಂದ ಆಗಾಗ್ಗೆ ಮೈಸೂರಿನಲ್ಲಿ ಸಿಎಂ ಜತೆ ಕಾಣಿಸಿಕೊಳ್ಳುತಿದ್ದಾರೆ.