Select Your Language

Notifications

webdunia
webdunia
webdunia
webdunia

ನರೇಂದ್ರ ಮೋದಿಯನ್ನು ತುಂಡು ತುಂಡಾಗಿ ಕತ್ತರಿಸುತ್ತೇವೆ: ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್ ಮಸೂದ್

ನರೇಂದ್ರ ಮೋದಿಯನ್ನು ತುಂಡು ತುಂಡಾಗಿ ಕತ್ತರಿಸುತ್ತೇವೆ: ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್ ಮಸೂದ್
ನವದೆಹಲಿ , ಶುಕ್ರವಾರ, 28 ಮಾರ್ಚ್ 2014 (13:56 IST)
PTI
ಲೋಕಸಭೆ ಚುನಾವಣೆ ಮುಂದಿರುವಂತೆ ಚುನಾವಣೆ ನೀತಿಗಳನ್ನು ಉಲ್ಲಂಘಿಸಿದ ಶಹರಾನ್‌ಪುರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್ ಮಸೂದ್, ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯನ್ನು ತುಂಡು ತುಂಡಾಗಿ ಕತ್ತರಿಸುವುದಾಗಿ ಹೇಳಿಕೆ ನೀಡಿ ಬಾರಿ ಕೋಲಾಹಲಕ್ಕೆ ಕಾರಣವಾಗಿದ್ದಾರೆ.

ಸಾರ್ವಜನಿಕ ಸಭೆಯಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಿದ ಮಸೂದ್, ನರೇಂದ್ರ ಮೋದಿಯನ್ನು ತುಂಡು ತುಂಡಾಗಿ ಕತ್ತರಿಸುವುದಾಗಿ ಹೇಳಿಕೆ ನೀಡಿ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. ಚುನಾವಣೆ ಆಯೋಗ ಭಾಷಣ ವರದಿಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿಗೆ ಆದೇಶ ನೀಡಿದೆ.

ಗುಜರಾತ್ ರಾಜ್ಯದಲ್ಲಿ ಕೇವಲ ಶೇ.4 ರಷ್ಟು ಮುಸ್ಲಿಂ ಸಮುದಾಯವಿದೆ. ಆದರೆ, ಉತ್ತರಪ್ರದೇಶದಲ್ಲಿ ಶೇ.22 ರಷ್ಟು ಮುಸ್ಲಿಂ ಸಮುದಾಯವಿದೆ.ಮೋದಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್ ಮಸೂದ್ ವಾಗ್ದಾಳಿ ನಡೆಸಿದ್ದಾರೆ.

Share this Story:

Follow Webdunia kannada