Webdunia - Bharat's app for daily news and videos

Install App

`ಮಹಿಳಾ ವಿರೋಧಿ ಮುತಾಲಿಕ್‌ಗೆ ಬಿಜೆಪಿ ಸೇರ್ಪಡೆಗೆ ಅವಕಾಶ ನೀಡಬಾರದು ಎಂದು ಹೇಳಿದ್ದೆ' : ಮನೋಹರ ಪರೀಕರ

Webdunia
ಬುಧವಾರ, 26 ಮಾರ್ಚ್ 2014 (10:58 IST)
PTI
" ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ್ ಮಹಿಳೆಯರ ವಿರೋಧಿ ಮತ್ತು ಹಿಂಸಾತ್ಮಕ ಚಟುವಟಿಕೆಯುಳ್ಳವರಾಗಿದ್ದು, ಅವರಿಗೆ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಸೇರ್ಪಡೆಗೆ ಅವಕಾಶ ನೀಡುವುದು ಸೂಕ್ತವಲ್ಲ ಎಂದು ಬಿಜೆಪಿ ವರಿಷ್ಠರಿಗೆ ನನ್ನ ಅಭಿಪ್ರಾಯ ತಿಳಿಸಿದ್ದೆ" ಎಂದು ಗೋವಾ ಮುಖ್ಯಮಂತ್ರಿ ಮನೋಹರ ಪರೀಕರ ಹೇಳಿದ್ದಾರೆ.

ಈ ಕುರಿತು ಮಾಧ್ಯಮದರೊಂದಿಗೆ ಮಾತನಾಡಿದ ಅವರು, "ಬಿಜೆಪಿ ಪಕ್ಷದಲ್ಲಿ ಮಹಿಳಾ ವಿರೋಧಿಗಳಿಗೆ ಮತ್ತು ಹಿಂಸಾತ್ಮಕ ಚಟುವಟಿಕೆ ಹೊಂದಿದವರಿಗೆ ಅವಕಾಶವಿಲ್ಲ. ಬಿಜೆಪಿಯ ಕರ್ನಾಟಕ ಘಟಕ ಮುತಾಲಿಕ್ ಸೇರ್ಪಡೆಗೆ ಸಂಬಂಧಿಸಿದಂತೆ ಸ್ಥಳೀಯ ಕೆಲವು ಕಾರಣಗಳಿಂದ ಕೆಲ ತಪ್ಪುಗಳನ್ನು ಎಸಗಿದೆ".

" ಯಾವುದೇ ಕಾರಣಕ್ಕೂ ಮಹಿಳಾ ವಿರೋಧಿಗಳಿಗೆ ಹಾಗೂ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರಿಗೆ ಬಿಜೆಪಿಗೆ ಅವಕಾಶ ನೀಡಬಾರದು ಎಂಬುದು ನನ್ನ ಭಾವನೆಯಾಗಿತ್ತು. ಇದು ಪಕ್ಷದ ವರ್ಚಸ್ಸಿಗೂ ಕುಂದು ತರುವಂತಹದ್ದು. ಈ ಹಿನ್ನೆಲೆಯಲ್ಲಿ ಪ್ರಮೋದ ಮುತಾಲಿಕ್ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಬಾರದು ಎಂದು ಬಿಜೆಪಿ ವರಿಷ್ಠರಿಗೆ ನನ್ನ ಅಭಿಪ್ರಾಯ ತಿಳಿಸಿದ್ದೆ" ಎಂದು ಅವರು ಸ್ಪಷ್ಟಪಡಿಸಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments