ನಿಮ್ಮ ಕೆಲಸ ಕಾರ್ಯಗಳಲ್ಲಿ ಬೇರೆಯವರ ಹಸ್ತಕ್ಷೇಪ ಕಿರಿ ಕಿರಿ ತಂದೀತು. ಕಷ್ಟದ ಸಮಯದಲ್ಲಿ ಸ್ನೇಹಿತರ ಸಹಾಯ ಪಡೆಯಲಿದ್ದೀರಿ. ಹಿಂದೆ ಮಾಡಿದ ಸಾಲಗಳು ಪಾವತಿಯಾಗಲಿವೆ. ವಾಹನ ಸಂಚಾರ ಮಾಡಲಿದ್ದೀರಿ.
ವೃಷಭ
ಕಾರ್ಯರಂಗದಲ್ಲಿ ಮೇಲಧಿಕಾರಿಗಳಿಂದ ಒತ್ತಡ ಕಂಡುಬರಲಿದೆ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲು ಮನಸ್ಸು ಹಾತೊರೆಯಲಿದೆ. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರುವುದು.
ಮಿಥುನ
ವ್ಯಾಪಾರೀ ವರ್ಗದವರಿಗೆ ವಿನೂತನ ಪ್ರಯೋಗಗಳು ಕೈ ಹಿಡಿಯಲಿವೆ. ಹಣಕಾಸಿನ ಹರಿವಿದ್ದರೂ ಅಷ್ಟೇ ಖರ್ಚೂ ಇರಲಿದೆ. ಸಂಗಾತಿಯ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ಕುಲದೇವರ ಪ್ರಾರ್ಥನೆ ಮಾಡಿ.
ಕರ್ಕಾಟಕ
ನಿಮ್ಮ ಕಷ್ಟದ ಸಮಯದಲ್ಲಿ ಆಗಿಬಂದವರಿಗೆ ಪ್ರತ್ಯುಪಕಾರ ಮಾಡುವ ಅವಕಾಶಗಳು ಬರಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ.
ಸಿಂಹ
ಕಾರ್ಯನಿಮಿತ್ತ ಪರವೂರಿಗೆ ಸಂಚರಿಸುವ ಅನಿವಾರ್ಯತೆ ಎದುರಾಗಲಿದೆ. ಮನೆಗೆ ನೆಂಟರಿಷ್ಟರ ಭೇಟಿ ಸಾಧ್ಯತೆ. ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆ. ಇಷ್ಟ ಮಿತ್ರರನ್ನು ಭೇಟಿಯಾಗಲಿದ್ದೀರಿ.
ಕನ್ಯಾ
ಬಹಳ ದಿನಗಳ ನಂತರ ನಿಮ್ಮ ಇಷ್ಟದ ವ್ಯಕ್ತಿಗಳನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಕೈಗೊಂಡ ಕೆಲಸಗಳಲ್ಲಿ ಯಶಸ್ಸು ಕಾಣಲಿದ್ದೀರಿ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಬೇಕಾಗುತ್ತದೆ.
ತುಲಾ
ಎಷ್ಟೇ ಕಷ್ಟವಿದ್ದರೂ ಅಂದುಕೊಂಡ ಕೆಲಸವನ್ನು ಪೂರ್ತಿ ಮಾಡಲೇಬೇಕೆಂಬ ಛಲ ಕಂಡುಬರಲಿದೆ. ಕೆಳ ಹಂತದ ನೌಕರರಿಗೆ ಮೇಲಧಿಕಾರಿಗಳಿಂದ ಕಿರಿ ಕಿರಿ ಕಂಡುಬಂದೀತು. ವಾಹನ ಸಂಚಾರದಲ್ಲಿ ಎಚ್ಚರಿಕೆಯಿರಲಿ.
ವೃಶ್ಚಿಕ
ಹೊಸ ಕೆಲಸಗಳಿಗೆ ಕೈ ಹಾಕುವ ಮುನ್ನ ಹಿರಿಯರ ಅಭಿಪ್ರಾಯ ಆಲಿಸಿ ಮುಂದುವರಿಯುವುದು ಸೂಕ್ತ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ.
ಸಹವಾಸ ದೋಷದಿಂದ ಕೆಲವೊಂದು ದುರಾಭ್ಯಾಸಗಳನ್ನು ರೂಢಿಸಿಕೊಳ್ಳಲಿದ್ದೀರಿ. ಸಂಗಾತಿಯ ಅಸಮಾಧಾನಕ್ಕೆ ಕಾರಣವಾಗಬೇಕಾದೀತು. ತಾಂತ್ರಿಕ ವೃತ್ತಿಯವರಿಗೆ ಮುನ್ನಡೆ ಕಂಡುಬರಲಿದೆ. ತಾಳ್ಮೆಯಿರಲಿ.
ಕುಂಭ
ಕಾರ್ಯರಂಗದಲ್ಲಿ ನಿಮ್ಮ ಎದುರಾಳಿಗಳಿಂದ ಪೈಪೋಟಿ ಕಂಡುಬಂದೀತು. ಮಹಿಳೆಯರಿಗೆ ಕೆಲಸ ಕಾರ್ಯಗಳಲ್ಲಿ ಪರರ ಸಹಾಯ ಸಿಗುವುದು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ.
ಮೀನ
ನಿಮ್ಮ ಒಳ್ಳೆಯತನವನ್ನು ಬೇರೆಯವರು ದುರುಪಯೋಗಪಡಿಸಿಕೊಳ್ಳುವ ಸಾಧ್ಯರತೆ. ನಿಮ್ಮ ವ್ಯವಹಾರಕ್ಕೆ ಅನುಕೂಲವಾಗುವಂತೆ ಕೆಲವೊಂದು ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ. ಅನಗತ್ಯ ಚಿಂತೆ ಬೇಡ.