Daily Horoscope
✕

ಮಹಿಳೆಯರಿಗೆ ಚುನಾವಣೆಯಲ್ಲಿ ಆದ್ಯತೆ :ಯಡಿಯೂರಪ್ಪ

Webdunia
ಶುಕ್ರವಾರ, 28 ಮಾರ್ಚ್ 2008 (17:06 IST)
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಮಹಿಳಾ ಅಭ್ಯರ್ಥಿಗಳಿಗೆ ಆದ್ಯತೆ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.

ಇಂದು (ಶುಕ್ರವಾರ) ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನೂರಾರು ಮಹಿಳಾ ಕಾರ್ಯಕರ್ತರನ್ನು ಪಕ್ಷಕ್ಕೆ ಆತ್ಮೀಯವಾಗಿ ಸ್ವಾಗತಿಸಿ ಮಾತನಾಡಿದ ಅವರು, ಮುಂದಿನ ಚುನಾವಣೆಗೆ ದಿನಾಂಕ ಘೋಷಣೆಯಾದ ಎರಡು ದಿನಗಳಲ್ಲಿ ಬಿಜೆಪಿ ಚುನಾವಣಾ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಲಾಗುವುದು. ಹಾಗೆಯೇ ಮಹಿಳೆಯರಿಗೆ ಹೆಚ್ಚಿನ ಟಿಕೆಟ್ ನೀಡಲಾಗುವುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಪ್ರಕಟಿಸಿರುವ ಭಾಗ್ಯಲಕ್ಷ್ಮೀ ಯೋಜನೆಯನ್ನು 1ಲಕ್ಷ ಮಹಿಳೆಯರಿಗೆ ವಿಸ್ತರಿಸಬೇಕೆಂದು ತಿಳಿಸಿದ ಅವರು, ಮುಂದಿನ ಚುನಾವಣೆಯಲ್ಲಿ ಪಕ್ಷದ ನಾಯಕರಿಗಿಂತ ಕಾರ್ಯಕರ್ತರ ಅಭಿಪ್ರಾಯಗಳಿಗೆ ಹೆಚ್ಚಿನ ಮಹತ್ವ ನೀಡುವುದಾಗಿ ತಿಳಿಸಿದರು.

ಮಾಜಿ ಸಚಿವ, ಶಾಸಕರ ಸೇರ್ಪಡೆ

ಕಾಂಗ್ರೆಸ್ ಮಾಜಿ ಸಚಿವ ಹಾಗೂ ಹಿರಿಯ ನಾಯಕ ಮಹದೇವು ಅವರು ಶುಕ್ರವಾರ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡರು. ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯದಿಂದ ಬೇಸೆತ್ತು ಕಾಂಗ್ರೆಸ್ ತೊರೆದಿರುವುದಾಗಿ ಅವರು ತಿಳಿಸಿದರು. ಅಲ್ಲದೆ, ಮಾಜಿ ಸಚಿವರಾದ ವಿರೂಪಾಕ್ಷ ಅಗಡಿ, ಮಾಜಿ ಶಾಸಕರುಗಳಾದ ರಾಜಣ್ಣ ಮಾಮನಿ, ಭೀಮಸಿ ಜಾರಕಿಹೊಳೆ, ರಾಮಕೃಷ್ಣ ದೊಡ್ಡಮಣಿಯವರು ಕೂಡ ಬಿಜೆಪಿ ಸೇರ್ಪಡೆಗೊಂಡರು.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕಣ್ಣು ಈ ರೀತಿ ಆಗುತ್ತಿದ್ದರೆ ತಕ್ಷಣ ಮೊಬೈಲ್ ವೀಕ್ಷಿಸುವುದು ನಿಲ್ಲಿಸಬೇಕು

ಚಳಿಗಾಲದಲ್ಲಿ ಮಕ್ಕಳ ದೇಹವನ್ನು ಬೆಚ್ಚಗಿಡುವ ಮತ್ತು ರೋಗನಿರೋಧಕ ಶಕ್ತಿ ಹೆಚ್ಚಿಸುವ 5 ಅತ್ಯುತ್ತಮ ಆಹಾರಗಳು

ಚಳಿಗಾಲದಲ್ಲಿ ಮಕ್ಕಳ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಇಲ್ಲಿದೆ ಉಪಾಯ

ಮಹಿಳೆಯರು ಆಕರ್ಷಕ ಸೊಂಟ ಬೇಕೆಂದರೆ ಯಾವ ಯೋಗಾಸನ ಮಾಡಬೇಕು

ಚರ್ಮದ ತುರಿಕೆಯಿಂದ ಕಪ್ಪು ಕಲೆಗಳು ಬೀಳುತ್ತಿವೆಯೇ, ಶಾಶ್ವತವಾಗಿ ಉಳಿಯದಂತೆ ತಡೆಯಲು ಇಲ್ಲಿದೆ ಟಿಪ್ಸ್

Show comments