Miscellaneous Special08 Election 0803 28 1080328038_1.htm

Daily Horoscope

Select Your Language

Notifications

webdunia
webdunia
webdunia
webdunia

ಸ್ವಾಮೀಜಿಗಳಿಗೆ ವಿಧಾನ ಪರಿಷತ್ ಸ್ಥಾನ: ಕುಮಾರಸ್ವಾಮಿ

ಸ್ವಾಮೀಜಿಗಳಿಗೆ
ಗ್ರಾಮೀಣ ಮಟ್ಟದಲ್ಲಿ ಸಮಾಜ ಸುಧಾರಣೆಯಲ್ಲಿ ಪಾಲ್ಗೊಳ್ಳುವ ಸ್ವಾಮೀಜಿಗಳನ್ನು ವಿಧಾನ ಪರಿಷತ್‌ನಲ್ಲಿ ಸ್ಥಾನ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಸಿದ್ದರಾಮೇಶ್ವರ ಡಿಇಡಿ ಕಾಲೇಜಿನ ನೂತನ ಕಟ್ಟಡದ ಉದ್ಘಾಟನೆ, ಪ್ರಾಥಮಿಕ ಮತ್ತು ಪ್ರೌಢಶಾಲೆ ಕಟ್ಟಡ ಶಿಲಾನ್ಯಾಸ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.

ಶೈಕ್ಷಣಿಕವಾಗಿ ಮುಂದೆ ಬರಲು ಹಾಗೂ ಕೆಳಮಟ್ಟದಿಂದ ಮೇಲೆ ಬರುತ್ತಿರುವ ಮಠಗಳಿಗೆ ಒತ್ತು ನೀಡುವ ಕೆಲಸವನ್ನು ಸ್ವಾಮೀಜಿಗಳು ಮಾಡುತ್ತಾರೆ. ಅಲ್ಲದೆ, ಸಮಾಜವನ್ನು ಮೇಲೆತ್ತುವ ಕಾರ್ಯದಲ್ಲಿ ಸ್ವಾಮೀಜಿಗಳ ಪಾತ್ರ ಅಪಾರ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ತಮ್ಮ ಪಕ್ಷದ ವತಿಯಿಂದ ವಿಧಾನ ಪರಿಷತ್‌ಗೆ ಒಂದು ಸ್ಥಾನವನ್ನು ಸ್ವಾಮೀಜಿಗಳಿಗೆ ನೀಡುವುದಾಗಿ ಅವರು ತಿಳಿಸಿದರು.

ಯಲಬುರ್ಗಾದ ಸ್ವಾಮೀಜಿಯವರು ಧಾರ್ಮಿಕ ಸಮ್ಮೇಳನದಲ್ಲಿ ಭಾಗವಹಿಸಿರುವುದಕ್ಕೆ ಅತೀವ ಸಂತೋಷವಾಗುತ್ತಿದೆ ಎಂದ ಅವರು, ನೂರಾರು ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ತನಗೆ ಆಶೀರ್ವಾದ ಮಾಡಿ, ಸನ್ಮಾನಿಸಿ ಗೌರವಿಸಿರುವುದು ಮುಂದಿನ ಚುನಾವಣೆ ಯಾತ್ರೆಗೆ ಸುಗಮ ಹಾದಿ ಮಾಡಿಕೊಟ್ಟಿದೆ ಎಂದು ತಿಳಿಸಿದರು.

Share this Story:

Follow Webdunia kannada