Miscellaneous Special08 Election 0804 29 1080429033_1.htm

Daily Horoscope

Select Your Language

Notifications

webdunia
webdunia
webdunia
webdunia

ಬಿಜೆಪಿಯನ್ನು ಸೋಲಿಸುವುದೇ ಪ್ರಮುಖ ಗುರಿ: ಮೊಯ್ಲಿ

ವೀರಪ್ಪಮೊಯ್ಲಿ
ಬೆಂಗಳೂರು: ಹಿಟ್ಲರ್ ಸಂತತಿಯಂತಿರುವ ಬಿಜೆಪಿಯನ್ನು ಸೋಲಿಸುವುದು ಕಾಂಗ್ರೆಸ್ ಪಕ್ಷದ ಮುಖ್ಯ ಗುರಿ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ತಿಳಿಸಿದ್ದಾರೆ.

ಗುಜರಾತ್ ಮಾದರಿಯಲ್ಲಿ ರಾಜ್ಯ ಕಟ್ಟಲು ಹೊರಟಿರುವ ಬಿಜೆಪಿ ಕ್ರಮ ಹಾಸ್ಯಸ್ಪದವಾಗಿದೆ ಎಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರ ಮೋಡಿ ರಾಜ್ಯದಲ್ಲಿ ನಡೆಯುವುದಿಲ್ಲ. ಇತ್ತೀಚೆಗೆ ಪುತ್ತೂರಿನಲ್ಲಿ ನಡೆದ ಸಮಾವೇಶದಲ್ಲಿ ಜನ ಭಾಗವಹಿಸದೇ ಇರುವುದೇ ಇದಕ್ಕೆ ಪ್ರಮುಖ ಸಾಕ್ಷಿ ಎಂದು ನುಡಿದರು.

ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜನ ಸ್ಪಷ್ಟ ಬಹುಮತ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಕಾಂಗ್ರೆಸ್‌ನಿಂದ ತಿರಸ್ಕೃತಗೊಂಡಿರುವ ಅಭ್ಯರ್ಥಿಗಳಿಗೆ ಜೆಡಿಎಸ್ ಹಾಗೂ ಬಿಜೆಪಿ ಗಾಳ ಹಾಕುತ್ತಿರುವುದನ್ನು ನೋಡಿದರೆ, ಆ ಪಕ್ಷಗಳಲ್ಲಿ ಅಭ್ಯರ್ಥಿಗಳ ಕೊರತೆ ಸ್ಪಷ್ಟವಾಗಿ ಎದ್ದು ಕಾಣುತ್ತದೆ ಎಂದು ಲೇವಡಿ ಮಾಡಿದರು.

ಬಿಜೆಪಿ ಜನರನ್ನು ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಿದೆ. ಗಣಿ ಅವ್ಯವಹಾರ ಮುಚ್ಚಿಡುವ ಕೆಲಸವನ್ನೂ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮಾಡುತ್ತಿವೆ ಎಂದು ತಿಳಿಸಿದ ಅವರು, ಬಿಜೆಪಿ ಪ್ರಣಾಳಿಕೆಯನ್ನು ಟೀಕಿಸಿದರು.

Share this Story:

Follow Webdunia kannada