Select Your Language

Notifications

webdunia
webdunia
webdunia
webdunia

ನಾಳೆ ರಾಜ್ಯಸಭೆಯಲ್ಲಿ ಲೋಕಪಾಲ ಮಸೂದೆ ಮಂಡನೆ; ಕಮಲ್‌ನಾಥ್

ನಾಳೆ ರಾಜ್ಯಸಭೆಯಲ್ಲಿ ಲೋಕಪಾಲ ಮಸೂದೆ ಮಂಡನೆ; ಕಮಲ್‌ನಾಥ್
ನವದೆಹಲಿ , ಗುರುವಾರ, 12 ಡಿಸೆಂಬರ್ 2013 (12:53 IST)
PTI
ಸಶಕ್ತ ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಹಿರಿಯ ಗಾಂಧಿವಾದಿ ಅಣ್ಣಾ ಹಜಾರೆ ನಡೆಸುತ್ತಿರುವ ನಿರಶನ ಮೂರನೇ ದಿನಕ್ಕೆ ಕಾಲಿರಿಸಿದ್ದು, ನಾಳೆ ಕೇಂದ್ರ ಸರಕಾರ ರಾಜ್ಯಸಭೆಯಲ್ಲಿ ಲೋಕಪಾಲ ಮಸೂದೆ ಮಂಡಿಸಲಿದೆ ಎಂದು ಮೂಲಗಳು ತಿಳಿಸಿವೆ.

ಚಳಿಗಾಲದ ಅಧಿವೇಶನದಲ್ಲಿ ಸಶಕ್ತ ಲೋಕಪಾಲ ಮಸೂದೆ ಮಂಡಿಸಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಕಮಲ್‌ನಾಥ್ ಹೇಳಿಕೆ ನೀಡಿರುವ ಮಧ್ಯೆಯೂ ಉಹಾಪೋಹಗಳು ಹರಡಿವೆ.

ಚಳಿಗಾಲದ ಅಧಿವೇಶನವನ್ನು ಮುಂದೂಡಲು ಕೇಂದ್ರ ಸರಕಾರ ತಂತ್ರ ರೂಪಿಸಿದೆ ಎನ್ನುವ ಮಾಧ್ಯಮಗಳ ವರದಿಗಳು ಸತ್ಯಕ್ಕೆ ದೂರವಾಗಿವೆ ಎಂದು ಸ್ಪಷ್ಟಪಡಿಸಿದ್ದಾರೆ.

ಲೋಕಸಭೆಯಲ್ಲಿ ವಿಪಕ್ಷಗಳು ಕೋಲಾಹಲ ಉಂಟು ಮಾಡಿದಾಗ ಅಧಿವೇಶನವನ್ನು ಮುಂದಕ್ಕೆ ಹಾಕಲು ಯುಪಿಎ ಸರಕಾರ ಯೋಜನೆ ರೂಪಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು.

ಸಶಕ್ತ ಲೋಕಪಾಲ ಮಸೂದೆ ಆರಂಭದಲ್ಲಿ ರಾಜ್ಯಸಭೆಯಲ್ಲಿ ಮಂಡಿಸಲಾಗುವುದು. ನಂತರ ಲೋಕಸಭೆಗೆ ಬರಲಿದೆ ಎಂದು ಕೇಂದ್ರ ಸಚಿವ ಕಮಲ್‌ನಾಥ್ ತಿಳಿಸಿದ್ದಾರೆ.

Share this Story:

Follow Webdunia kannada