Newsworld News National 0909 12 1090912096_1.htm

Select Your Language

Notifications

webdunia
webdunia
webdunia
webdunia

ಶ್ರೀನಗರ; ಪ್ರಬಲ ಬಾಂಬ್ ಸ್ಫೋಟಕ್ಕೆ 4ಬಲಿ

ಶ್ರೀನಗರ
ಶ್ರೀನಗರ , ಶನಿವಾರ, 12 ಸೆಪ್ಟಂಬರ್ 2009 (20:38 IST)
ಶ್ರೀನಗರದ ಕೇಂದ್ರೀಯ ಕಾರಾಗೃಹದ ಸಮೀಪದ ಸಂಭವಿಸಿದ ಶಕ್ತಿಶಾಲಿ ಬಾಂಬ್ ಸ್ಫೋಟದಲ್ಲಿ ಇಬ್ಬರು ಪೊಲೀಸರು ಹಾಗೂ ಮಹಿಳೆಯೊಬ್ಬರು ಸೇರಿದಂತೆ ನಾಲ್ಕು ಮಂದಿ ಸಾವನ್ನಪ್ಪಿದ್ದು, ಒಂಬತ್ತು ಮಂದಿ ಪೊಲೀಸರು ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ಸಂಭವಿಸಿದೆ.

ಪೊಲೀಸ್ ಜೀಪ್ ಹೋಗುತ್ತಿದ್ದಾಗ ಸ್ಫೋಟ ಸಂಭವಿಸಿದ್ದು, ಪ್ರತ್ಯೇಕತಾವಾದಿಗಳೇ ಇದಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಧಾವಿಸಿದ್ದಾರೆ.

ಘಟನೆಯಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್, ಕಾನ್‌ಸ್ಟೇಬಲ್, ಮಹಿಳೆಯೊಬ್ಬರು ಹಾಗೂ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಮೃತರ ಸಂಖ್ಯೆ ನಿಖರವಾಗಿ ತಿಳಿದು ಬಂದಿಲ್ಲ ಎಂದು ವಿವರಿಸಿದ್ದಾರೆ. ಈವರೆಗೂ ಯಾರನ್ನೂ ಬಂಧಿಸಿಲ್ಲ ಎಂದು ತಿಳಿಸಿರುವ ಅಧಿಕಾರಿಗಳು ಆರೋಪಿಗಳಿಗಾಗಿ ತೀವ್ರ ಶೋಧ ಕಾರ್ಯಾಚರಣೆ ಕೈಗೊಂಡಿರುವುದಾಗಿ ಹೇಳಿದ್ದಾರೆ. ಬಾಂಬ್ ಸ್ಫೋಟದ ಹೊಣೆಯನ್ನು ಕೂಡ ಯಾವ ಸಂಘಟನೆಯೂ ಹೊತ್ತುಕೊಂಡಿಲ್ಲ.

Share this Story:

Follow Webdunia kannada