ಕೇಂದ್ರ ಸಚಿವ ಸ್ಥಾನಕ್ಕೆ ಕೃಷ್ಣ ರಾಜೀನಾಮೆ
ನವದೆಹಲಿ , ಶುಕ್ರವಾರ, 26 ಅಕ್ಟೋಬರ್ 2012 (18:19 IST)
ಕೇಂದ್ರ ವಿದೇಶಾಂಗ ಸಚಿವ ಸ್ಥಾನಕ್ಕೆ ಎಸ್. ಎಂ .ಕೃಷ್ಣ ರಾಜೀನಾಮೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭಾನುವಾರ ಸಚಿವ ಸಂಪುಟ ಪುನಾರಚನೆ ಹಿನ್ನಲೆಯಲ್ಲಿ ರಾಜಿನಾಮೆ ನೀಡಿದ್ದಾರೆ .ರಾಜೀನಾಮೆಯಿಂದಾಗಿ ರಾಜ್ಯ ರಾಜಕಾರಣಕ್ಕೆ ಮರಳುವ ಸಾಧ್ಯತೆ ಇದೆ .80
ವರ್ಷ ವಯಸ್ಸಿನ ಎಸ್.ಎಂ.ಕೃಷ್ಣ ತಮ್ಮ ರಾಜೀನಾಮೆ ಪತ್ರವನ್ನು ಪ್ರದಾನಮಂತ್ರಿ ಮನಮೋಹನ್ ಸಿಂಗ್ ಅವರಿಗೆ ಇಂದು ಮದ್ಯಾಹ್ನ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.ಮುಂದಿನ ವರ್ಷದ ಆರಂಭದಲ್ಲಿ ರಾಜ್ಯದಲ್ಲಿ ವಿಧಾನಸಭೆಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣಕ್ಕೆ ಮರಳುವಂತೆ ಪಕ್ಷದ ಹೈಕಮಾಂಡ್ ಕೋರಿದ್ದರಿಂದ ಕೃಷ್ಣ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಲೋಕಾಯುಕ್ತ ನ್ಯಾಯಾಲಯ ಮೈಸೂರ್-ಬೆಂಗಳೂರು ಎಕ್ಸ್‌ಪ್ರೆಸ್ ಹೈವೇ ಭೂ ಸ್ವಾಧೀನ ಪ್ರಕರಣದಲ್ಲಿ ಬಾಗಿಯಾಗಿರುವ ಬಗ್ಗೆ ತನಿಖೆ ನಡೆಸುವಂತೆ ಗುರುವಾರ ಲೋಕಾಯುಕ್ತ ಕೋರ್ಟ್ ಆದೇಶ ನೀಡಿದೆ.