Webdunia - Bharat's app for daily news and videos

Install App

ಅಸ್ಸಾಂನಲ್ಲಿ ರೈಲು ಹಳಿತಪ್ಪಿ 17 ಜನರಿಗೆ ಗಂಭೀರ ಗಾಯ

Webdunia
ಬುಧವಾರ, 16 ಏಪ್ರಿಲ್ 2014 (10:24 IST)
ಕೇಂದ್ರ ಅಸ್ಸಾಂನ ಮೋರಿಗಾಂವ್ ಜಿಲ್ಲೆಯ ಆಜುರಿ ನಿಲ್ದಾಣದಲ್ಲಿ ಇಂದು ಮುಂಜಾನೆ 15666 ಬಿಜಿ ಎಕ್ಸ್ಪ್ರೆಸ್ ರೈಲುಗಾಡಿಯ ಹತ್ತು ಬೋಗಿಗಳು ಹಳಿತಪ್ಪಿ 50ಕ್ಕಿಂತ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
PTI

ಬುಧವಾರ ಮುಂಜಾನೆ ಸುಮಾರು 2 ಗಂಟೆ 5 ನಿಮಿಷಕ್ಕೆ ಮೋರಿಗಾಂವ್ ಜಿಲ್ಲೆಯ ಆಜುರಿ ನಿಲ್ದಾಣದ ಬಳಿ ದಿಮಾಪುರ್- ಕಾಮಾಕ್ಯ ರೈಲುಗಾಡಿಯ ಹತ್ತು ಬೋಗಿಗಳು ಹಳಿತಪ್ಪಿ ಕೆಳಗೆ ಬಿದ್ದವು ಎಂದು ಪೋಲಿಸರು ತಿಳಿಸಿದ್ದಾರೆ.

ಘಟನೆಯಲ್ಲಿ 17 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಗೌಹಾತಿ ವೈದ್ಯಕೀಯ ಕಾಲೇಜು ಆಸ್ಪತ್ರೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಉಳಿದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮೋರಿಗಾಂವ್ ಸರ್ಕಾರಿ ಆಸ್ಪತ್ರೆಯಲ್ಲಿ ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಯಿತು ಎಂದು ಈಶಾನ್ಯ ಗಡಿನಾಡಿನ ರೈಲ್ವೆ ಮೂಲಗಳು ತಿಳಿಸಿವೆ. ಹಿರಿಯ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು ರಕ್ಷಣಾ ಕಾರ್ಯ ಮುಂದುವರೆದಿದೆ.

ಸಹಾಯವಾಣಿ ದೂರವಾಣಿ ಸಂಖ್ಯೆಗಳನ್ನು ಸಕ್ರಿಯ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಂಖ್ಯೆಗಳು ಈ ರೀತಿ ಇವೆ. ದಿಮಾಪುರ್-03862-228404, ಲುಮದಿಂಗ್-03674-264848/49/50 ಮತ್ತು ಗೌಹಾತಿ-0361-2731621/22/23 .

ವೆಬ್ದುನಿಯಾವನ್ನು ಓದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments