Select Your Language

Notifications

webdunia
webdunia
webdunia
webdunia

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ
, ಶುಕ್ರವಾರ, 18 ಏಪ್ರಿಲ್ 2014 (12:07 IST)
PR
PR
ಕುಮಟಾ: ಬಸ್‌ಕಂಡಕ್ಟರ್‌ನೊಬ್ಬ ಅಪ್ರಾಪ್ತ ವಯಸ್ಕ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದರಿಂದ ಮನನೊಂದ ಬಾಲಕಿ ಮೈಗೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕುಮಟಾದಲ್ಲಿ ನಡೆದಿದೆ. ತೀವ್ರ ಸುಟ್ಟಗಾಯಗಳಾದ ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ. ಕುಮಟಾ ತಾಲೂಕಿನ ಬಾಡಾ ಗ್ರಾಮಕ್ಕೆ ಈ ಯುವತಿ ಸೇರಿದ್ದಾಳೆ. ಬಾಲಕಿ ಒಂದನೇ ಪಿಯುಸಿಯಲ್ಲಿ ಓದುತ್ತಿದ್ದಳು. ಬಸ್ ಕಂಡಕ್ಟರ್ ಕಮಲಾಕರ್ ನಾಯ್ಕ್ ಪರಾರಿಯಾಗಿದ್ದಾನೆ.

ಕುಮಟಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. .ಆರೋಪಿ ಕಮಲಾಕರ್ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಪೊಲೀಸರು ಆರೋಪಿಗಾಗಿ ಹುಡುಕುತ್ತಿದ್ದಾರೆ.

Share this Story:

Follow Webdunia kannada