Webdunia - Bharat's app for daily news and videos

Install App

2012ರ ಏಷ್ಯಾಕಪ್‌ಗೆ ಬಾಂಗ್ಲಾದೇಶ ಆತಿಥ್ಯ

Webdunia
ಮಂಗಳವಾರ, 14 ಡಿಸೆಂಬರ್ 2010 (13:16 IST)
2012 ರಲ್ಲಿ ನಡೆಯಲಿರುವ ಏಷ್ಯಾ ಕಪ್ ಆತಿಥ್ಯವನ್ನು ಬಾಂಗ್ಲಾದೇಶಕ್ಕೆ ನೀಡಲಾಗಿದೆ. ಢಾಕಾದಲ್ಲಿ ನಡೆದ ಏಷ್ಯಾ ಕ್ರಿಕೆಟ್ ಕೌನಿಲ್ಸ್ (ಎಸಿಸಿ) ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

2012 ಮಾರ್ಚ್ 1ರಿಂದ 12ರ ವರೆಗೆ ಮೀರ್‌ಪುರ್‌ದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಟೂರ್ನಮೆಂಟ್ ನಡೆಯಲಿದೆ. ಈ ಹಿಂದೆ 2000ನೇ ಇಸವಿಯಲ್ಲಿಯೂ ಬಾಂಗ್ಲಾದೇಶ ಆತಿಥ್ಯ ವಹಿಸಿತ್ತು.

ಕ್ಷಣ ಕ್ಷಣದ ತಾಜಾ ಸುದ್ದಿಗಳಿಗೆ, ವಿಶೇಷ ಸುದ್ದಿಗಳಿಗೆ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಏಷ್ಯಾದಲ್ಲಿ ಟೆಸ್ಟ್‌ಗೆ ಮಾನ್ಯತೆ ಪಡೆದ ಅಗ್ರ ನಾಲ್ಕು ರಾಷ್ಟ್ರಗಳಾದ ಭಾರತ, ಶ್ರೀಲಂಕಾ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳು ಈ ಟೂರ್ನಿಯಲ್ಲಿ ಭಾಗವಹಿಸಲಿದೆ. ಭವಿಷ್ಯದಲ್ಲಿ ತಂಡಗಳ ಏರಿಕೆ ಮಾಡುವ ಉದ್ದೇಶವಿದ್ದು, ಈ ನಿಟ್ಟಿನಲ್ಲಿ ಅಫಘಾನಿಸ್ತಾನ ಪ್ರಮುಖ ತಂಡವಾಗಿದೆ ಎಂದು ಎಸಿಸಿ ಮಾಧ್ಯಮ ಮ್ಯಾನೇಜರ್ ಶಹರಾಯರ್ ಖಾನ್ ತಿಳಿಸಿದ್ದಾರೆ.

ಆತಿಥ್ಯ ಹಕ್ಕಿಗೆ ಸಂಬಂಧಿಸಿದಂತೆ ಚೀನಾದಿಂದ ಪ್ರಬಲ ಪೈಪೋಟಿ ಎದುರಾಗಿತ್ತು. ಆದರೆ ಚೀನಾದಲ್ಲಿ ಸೂಕ್ತ ವ್ಯವಸ್ಥೆಯ ಕೊರತೆಯ ಹಿನ್ನೆಲೆಯಲ್ಲಿ ಹಕ್ಕು ಬಾಂಗ್ಲಾಕ್ಕೆ ಲಭಿಸಿದೆ. ಏಷ್ಯಾ ಗೇಮ್ಸ್‌ನಲ್ಲಿ ಟ್ವೆಂಟಿ-20 ಪ್ರಕಾರದ ಕ್ರಿಕೆಟನ್ನು ಯಶಸ್ವಿಯಾಗಿ ಆಯೋಜಿಸಿದ್ದ ಚೀನಾ, ಏಷ್ಯಾ ಕಪ್ ಆತಿಥ್ಯಕ್ಕೂ ಅತೀವ ಉತ್ಸುಕತೆ ವ್ಯಕ್ತಪಡಿಸಿತ್ತು.

ಬಾಂಗ್ಲಾದೇಶದಲ್ಲಿ ನಡೆಯಲಿರುವ ಏಷ್ಯಾಕಪ್ ಟೂರ್ನಿಯನ್ನು ಯಶಸ್ವಿಯಾಗಿ ಸಂಘಟಿಸಲಿದ್ದೇವೆ ಎಂದು ಎಸಿಸಿಯ ಸಿಇಒ ಸಯ್ಯದ್ ಅಶ್ರಫುಲ್ ಹಕ್ ತಿಳಿಸಿದರು.

ಈ ಬಾರಿ ನಡೆದಿದ್ದ ಏಷ್ಯಾಕಪ್‌ನಲ್ಲಿ ಆತಿಥೇಯ ಶ್ರೀಲಂಕಾ ತಂಡವನ್ನು ಮಣಿಸಿದ್ದ ಭಾರತ ತಂಡವು 15 ವರ್ಷಗಳ ಬಳಿಕ ಏಷ್ಯಾಕಪ್ ಜಯಿಸಿದ ಸಾಧನೆ ಮಾಡಿತ್ತು.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments