Webdunia - Bharat's app for daily news and videos

Install App

ನಾನು ಎಲ್ಲೂ ರಾಜಕೀಯ ಮಾಡಿಲ್ಲ: ಗಂಗೂಲಿ ನುಡಿ

Webdunia
ಭಾನುವಾರ, 16 ಜನವರಿ 2011 (12:38 IST)
ನಾನು ಕ್ರಿಕೆಟಿಗನಾಗಿ ಯಾವಾಗಲೂ ಪಾರದರ್ಶಕತೆ ಕಾಪಾಡಿಕೊಂಡವ, ಅಲ್ಲದೇ ಎಲ್ಲೂ ರಾಜಕೀಯ ಮಾಡಿಲ್ಲ ಎಂದು ಇಂಡಿಯನ್ ಪ್ರೀಮಿಯರ್ ಲೀಗ್ ಆಟಗಾರರ ಹರಾಜಿನಲ್ಲಿ ಎಲ್ಲ ಫ್ರಾಂಚೈಸಿಗಳ ನಿರ್ಲಕ್ಷ್ಯಕ್ಕೆ ಗುರಿಯಾಗಿದ್ದ ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ನೋವಿನ ಮಾತುಗಳು.

ಪರೋಕ್ಷವಾಗಿ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿನ ಕಡೆಗಣನೆ ಕುರಿತು ಮೌನ ಮುರಿದು ಮಾತನಾಡಿದ ಅವರು,ನಾನು ಎಂದಿಗೂ ರಾಜಕೀಯ ಮಾಡಿಲ್ಲ. ಕ್ರಿಕೆಟಿಗನಾಗಿ ನಾನು ಪಾರದರ್ಶಕತೆ ಕಾಪಾಡಿಕೊಂಡು ಬಂದ ವ್ಯಕ್ತಿಯಾಗಿದ್ದೇನೆ. ಒಂದು ವೇಳೆ ನಾನು ರಾಜಕೀಯ ಮಾಡಿದ್ದರೆ ಈ ಹಂತ ಏರುತ್ತಿರಲಿಲ್ಲ. ಏನೇ ಮಾಡಿದರೂ ನಿಮಗೆ ಎಲ್ಲ ಕಾಲದಲ್ಲೂ ಉನ್ನತ ಸ್ಥಾನದಲ್ಲಿ ಇರಲು ಸಾಧ್ಯವಿಲ್ಲ ಎಂದು ಹೇಳಿದರು.

ಗಂಗೂಲಿ ಐಪಿಎಲ್‌ನ ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲಿ ಮೂರು ಸೀಸನ್‌ನಲ್ಲಿ ಆಟವಾಡಿದ್ದರು. ಆದರೆ ಇತ್ತೀಚೆಗಷ್ಟೇ ನಡೆ ಹತ್ತು ಫ್ರಾಂಚೈಸಿಗಳ ಐಪಿಎಲ್ ಹರಾಜಿನಲ್ಲಿ ಯಾವುದೇ ತಂಡವೂ ಗಂಗೂಲಿ ಖರೀದಿಗೆ ಮುಂದಾಗಿಲ್ಲವಾಗಿತ್ತು.

ಏತನ್ಮಧ್ಯೆ 38ರ ಹರೆಯದ ಮಾಜಿ ಕಪ್ತಾನ ಸೌರವ್ ಗಂಗೂಲಿ ತನಗಿನ್ನೂ ನಿವೃತ್ತಿಯಾಗುವ ವಯಸ್ಸು ಆಗಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಅಲ್ಲದೇ ಆಯ್ಕೆಗಾರರು ತಮ್ಮ ಆಯ್ಕೆಯಲ್ಲಿಯೂ ಎಡವುತ್ತಿದ್ದಾರೆ ಎಂದು ಆರೋಪಿಸಿದರು.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments