Webdunia - Bharat's app for daily news and videos

Install App

ಸಿಡಿಯಿತು ಕಾಂಬ್ಳಿ ಬಾಂಬ್; ಎಚ್ಚೆತ್ತ ಕ್ರೀಡಾ ಸಚಿವಾಲಯದಿಂದ ತನಿಖೆ

Webdunia
ಶನಿವಾರ, 19 ನವೆಂಬರ್ 2011 (15:50 IST)
1996 ರ ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿದೆ ಎಂದು 15 ವರ್ಷಗಳ ನಂತರ ಆರೋಪ ಮಾಡುವ ಮೂಲಕ ದೇಶದ ಕ್ರೀಡಾ ಜಗತ್ತಿನಲ್ಲೇ ಭಾರಿ ಕೋಲಾಹಲವನ್ನೇ ಎಬ್ಬಿಸಿದ್ದ ವಿನೋದ್ ಕಾಂಬ್ಳಿ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಕ್ರೀಡಾ ಸಚಿವಾಲಯವು ಪ್ರಕರಣದ ತನಿಖೆಯನ್ನು ಕೈಗೆತ್ತಿಗೊಂಡಿದೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಮಾರ್ಚ್ 13, 1996ರಲ್ಲಿ ಶ್ರೀಲಂಕಾ ವಿರುದ್ಧ ಕೊಲ್ಕತಾದ ಈಡೆನ್ ಗಾರ್ಡೆನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೋಸದಾಟ ನಡೆದಿದೆ ಎಂದು ನೆವೆಂಬರ್ 17ರಂದು ಖಾಸಗಿ ಟಿ.ವಿ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕಾಂಬ್ಳಿ ಆಪಾದಿಸಿದ್ದರು. ಅಂದಿನ ಆ ಪಂದ್ಯದಲ್ಲಿ ಟಾಸ್ ಗೆದ್ದಿದ್ದರ ಹೊರತಾಗಿಯೂ ನಾಯಕ ಮೊಹಮ್ಮದ್ ಅಜರುದ್ದೀನ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿರುವ ನಿರ್ಧಾರವು ಈಗಲೂ ಸಂಶಯಕ್ಕೆ ಎಡೆಮಾಡಿವೆ ಎಂದು ಕಾಂಬ್ಳಿ ಭಾವುಕರಾಗಿಯೇ ನುಡಿದಿದ್ದರು.

ಇದೀಗ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಕ್ರೀಡಾ ಸಚಿವರಾದ ಅಜಯ್ ಮಕೇನ್, ತನಿಖೆಗೆ ಮುಂದಾಗಿದ್ದಾರೆ. ಪ್ರಕರಣವನ್ನು ಲಘುವಾಗಿ ಪರಿಗಣುಸುತ್ತಿಲ್ಲ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಐಸಿಸಿಐ) ಪ್ರಕರಣದ ತನಿಖೆ ಕೈಗೊಳ್ಳಬೇಕು. ಒಂದು ವೇಳೆ ಹಾಗಾಗದಿದ್ದಲ್ಲಿ ನಾವೇ ಖುದ್ದಾಗಿ ತನಿಖೆಗೆ ಮುಂದಾಗಲಿದ್ದೇವೆ ಎಂದಿದ್ದಾರೆ.

ತಂಡದ ಸದಸ್ಯನೊಬ್ಬನೇ ಇಂತಹ ಗಂಭೀರವಾದ ಆರೋಪ ಮಾಡಿದಾಗ ಅದನ್ನು ಕೂಲಂಕುಷವಾಗಿ ತನಿಖೆ ನಡೆಸಬೇಕು. ನಿಜವಾಗಿಯೂ ಏನಾಗಿದೆ ಎಂಬುದನ್ನು ಅರಿಯಲು ದೇಶದ ಜನರಿಗೆ ಹಕ್ಕಿದೆ. ಆರೋಪ ಸುಳ್ಳು ಅಥವಾ ಸರಿಯಾಗಿರಬಹುದು ಆದರೆ ಸತ್ಯಾಂಶ ಅರಿಯುವ ಹಕ್ಕು ಜನರಿಗಿದೆ ಎಂದು ವಿವರಿಸಿದ್ದಾರೆ.

ವಿನೋದ್ ಕಾಂಬ್ಳಿ ಬಗ್ಗೆ ಅನುಕಂಪ ವ್ಯಕ್ತಪಡಿಸಿರುವ ಕ್ರೀಡಾ ಸಚಿವರು, ಒಂದು ವೇಳೆ ಆರೋಪ ನಿಜವಾದ್ದಲ್ಲಿ ಇದು ದೇಶದ ಕ್ರಿಕೆಟ್ ಪಾಲಿಗೆ ದುರದೃಷ್ಟಕರ ಸಂಗತಿ ಎಂದರು.

ಒಟ್ಟಾರೆಯಾಗಿ ಕ್ರಿಕೆಟ್ ಜೀವನದ ನಂತರ ರಾಜಕೀಯ ಕ್ಷೇತ್ರಕ್ಕೆ ಎಂಟ್ರಿ ಮಾಡಿರುವ ಅಜರುದ್ದೀನ್ ಮೇಲೆ ಇದರಿಂದ ಯಾವ ರೀತಿ ಪರಿಣಾಮ ಬೀರಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ವೆಬ್‌ದುನಿಯಾ ಕನ್ನಡ ಓದುಗರೇ! ಕಾಮೆಂಟ್ ಮಾಡೋ ಮುನ್ನ ಇಲ್ಲೊಮ್ಮೆ ಓದಿ ನೋಡಿ!

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments