Webdunia - Bharat's app for daily news and videos

Install App

ಸೆಹ್ವಾಗ್ ತವರಿಗೆ; ಆಂಗ್ಲರ ನಾಡಿಗೆ ಕಾರ್ತಿಕ್

Webdunia
ಬುಧವಾರ, 10 ಜೂನ್ 2009 (11:45 IST)
ಗಾಯಾಳುವಾಗಿ ಟ್ವೆಂಟಿ-20 ವಿಶ್ವಕಪ್‌ನಿಂದ ಹೊರಗುಳಿದಿರುವ ವೀರೇಂದ್ರ ಸೆಹ್ವಾಗ್ ಬದಲಿಗೆ ಭಾರತ ತಂಡವನ್ನು ಐಪಿಎಲ್‌ನಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್ ಪರ ಆಡಿದ್ದ ದಿನೇಶ್ ಕಾರ್ತಿಕ್ ಸೇರಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಪ್ರಕಟಿಸಿದೆ.

ಬಾಂಗ್ಲಾದೇಶದ ವಿರುದ್ಧದ ಆರಂಭಿಕ ಪಂದ್ಯ ಮತ್ತು ಅದಕ್ಕೂ ಮೊದಲು ನಡೆದಿದ್ದ ಎರಡು ಅಭ್ಯಾಸ ಪಂದ್ಯಗಳಿಂದ ದೂರ ಉಳಿದಿದ್ದ ಸೆಹ್ವಾಗ್ ವಿಶ್ವಕಪ್‌ನ ಮುಂದಿನ ಪಂದ್ಯಗಳಲ್ಲೂ ಆಡುವುದಿಲ್ಲ ಎಂದು ಬಿಸಿಸಿಐ ತಿಳಿಸಿದೆ.

ಭುಜ ಗಾಯದಿಂದ ಬಳಲುತ್ತಿರುವ ಸೆಹ್ವಾಗ್ ಶಸ್ತ್ರಚಿಕಿತ್ಸೆ ಹಿನ್ನಲೆಯಲ್ಲಿ ತವರಿಗೆ ಮರಳಲಿದ್ದಾರೆ. ಅವರ ಬದಲಿಗೆ ಅಂತಿಮ 15 ಸದಸ್ಯರ ತಂಡವನ್ನು ಸೇರಿಕೊಳ್ಳಲು ದಿನೇಶ್ ಕಾರ್ತಿಕ್ ಶೀಘ್ರದಲ್ಲೇ ಇಂಗ್ಲೆಂಡ್‌ನತ್ತ ಪ್ರಯಾಣ ಬೆಳೆಸಲಿದ್ದಾರೆ.

ಕಾರ್ತಿಕ್ ವಿಕೆಟ್ ಕೀಪರ್ ಕೂಡ ಆಗಿರುವ ಕಾರಣ ತಂಡಕ್ಕೆ ಹೆಚ್ಚಿನ ಬಲ ಬಂದಂತಾಗಿದೆ. ಒಂದು ವೇಳೆ ನಾಯಕ ಮಹೇಂದ್ರ ಸಿಂಗ್ ಧೋನಿ ಗಾಯಾಳುವಾದಲ್ಲಿ ಕಾರ್ತಿಕ್‌ರನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ. ಟೀಮ್ ಇಂಡಿಯಾ ಅಂತಿಮ ಆಯ್ಕೆ ಪಟ್ಟಿಯಲ್ಲಿ ಈ ಮೊದಲು ದಿನೇಶ್ ಕಾರ್ತಿಕ್ ಸ್ಥಾನ ಪಡೆಯಲು ವಿಫಲರಾಗಿದ್ದರು.

2007 ರ ಟ್ವೆಂಟಿ-20 ವಿಶ್ವಕಪ್ ವಿಜೇತ ಭಾರತೀಯ ತಂಡದಲ್ಲಿ ಕಾರ್ತಿಕ್ ಕೂಡ ಇದ್ದರು. ಆದರೆ ಈ ಬಾರಿ ಆಯ್ಕೆ ಸಂದರ್ಭದಲ್ಲಿ ಅವರ ಅನಿಶ್ಚಿತ ಲಯದ ಕಾರಣ ರಾಷ್ಟ್ರೀಯ ತಂಡಕ್ಕೆ ಆರಿಸಲು ಆಯ್ಕೆಗಾರರು ಹಿಂದೇಟು ಹಾಕಿದ್ದರು. ಆದರೆ ಇತ್ತೀಚೆಗಷ್ಟೇ ಮುಕ್ತಾಯ ಕಂಡಿದ್ದ ಐಪಿಎಲ್ ದ್ವಿತೀಯ ಆವೃತ್ತಿಯಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದ ಕಾರ್ತಿಕ್ ಕೊನೆಗೂ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮತ್ತೆ ಗುರುತಿಸಿಕೊಂಡಿದ್ದಾರೆ.

ಕಾರ್ತಿಕ್ ಇದುವರೆಗೆ ಭಾರತದ ಪರ ಆರು ಅಂತಾರಾಷ್ಟ್ರೀಯ ಟ್ವೆಂಟಿ-20 ಪಂದ್ಯಗಳನ್ನಾಡಿದ್ದಾರೆ. ಆದರೆ ನಿರ್ವಹಣೆ ಮಟ್ಟವನ್ನು ಗಮನಿಸಿದಾಗ ಅವರದ್ದು ಪೇಲವ ಪ್ರದರ್ಶನ. ತನ್ನ ಆರಂಭಿಕ ಪಂದ್ಯದಲ್ಲಿ ಅಜೇಯ 31 ರನ್ ಗಳಿಸುವ ಮೂಲಕ ದಕ್ಷಿಣ ಆಫ್ರಿಕಾ ವಿರುದ್ಧದ ಟ್ವೆಂಟಿ-20 ಪಂದ್ಯವನ್ನು ಗೆಲ್ಲಿಸುವಲ್ಲಿ ಕಾರ್ತಿಕ್ ಮಹತ್ವದ ಪಾತ್ರವಹಿಸಿದ್ದರಾದರೂ ನಂತರ ಅವರಾಡಿದ ಐದೂ ಪಂದ್ಯಗಳಲ್ಲಿ ವಿಫಲರಾಗಿದ್ದರು. ಆರು ಅಂತಾರಾಷ್ಟ್ರೀಯ ಟ್ವೆಂಟಿ-20ಗಳನ್ನಾಡಿರುವ ಕಾರ್ತಿಕ್ ಇದುವರೆಗೆ ಗಳಿಸಿರುವ ರನ್ 67 ಮಾತ್ರ.

ಆರಂಭಿಕ ಆಟಗಾರ ಸೆಹ್ವಾಗ್ ಸ್ಥಾನಕ್ಕೆ ರೋಹಿತ್ ಶರ್ಮಾ ನ್ಯಾಯ ಒದಗಿಸುವಲ್ಲಿ ಸಫಲರಾಗಿರುವ ಕಾರಣ ದಿನೇಶ್ ಕಾರ್ತಿಕ್‌ರಿಗೆ ಆಡಲು ಅವಕಾಶ ಸಿಗುವ ಸಾಧ್ಯತೆ ತೀರಾ ಕಡಿಮೆ. ಹಾಗೊಂದು ವೇಳೆ ಯಾರಾದರೂ ಗಾಯಗೊಂಡಲ್ಲಿ ಕಾರ್ತಿಕ್ ಕಣಕ್ಕಿಳಿಯಬಹುದಾಗಿದೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments