ರಾಜ್ಯದಲ್ಲಿ ನೂತನ ಕ್ರೀಡಾ ನೀತಿ ಜಾರಿ ಹಾಗೂ ಕ್ರೀಡಾಪಟುಗಳಿಗೆ ಉತ್ತೇಜನ ನೀಡಿದ ಹಿನ್ನೆಲೆಯಲ್ಲಿ, ಕಾಮನ್‌ವೆಲ್ತ್ ಗೇಮ್ಸ್ ಮತ್ತು ಏಷ್ಯನ್ ಗೇಮ್ಸ್ ಪಂದ್ಯಾವಳಿಗಳಲ್ಲಿ ರಾಜ್ಯಕ್ಕೆ ಹೆಚ್ಚಿನ ಪದಕಗಳು ಬಂದಿವೆ ಎಂದು ರೋಹ್ಟಕ್ ಜಿಲ್ಲೆಯ ಕಾಂಗ್ರೆಸ್ ಸಂಸದ ದೀಪೆಂದರ್ ಸಿಂಗ್ ಹೂಡಾ ಹೇಳಿದ್ದಾರೆ.
ಏಷ್ಯನ್ ಗೇಮ್ಸ್ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಪಡೆದ ಭಾರತ ಕಬಡ್ಡಿ ತಂಡದ ನಾಯಕ ಕಪ್ತಾನ್ ಸಿಂಗ್ ಅವರನ್ನು ಸನ್ಮಾನಿಸಲು ಅಕಾಲ್‌ಘರ್ ಗ್ರಾಮದಲ್ಲಿ ಆಯೋಜಿಸಿದ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಹೂಡಾ, ಹರಿಯಾಣಾ ಸರಕಾರ ಜಾರಿಗೆ ತಂದ ನೂತನ ಕ್ರೀಡಾ ನೀತಿಗಳಿಂದ ಪ್ರತಿಭಾವಂತ ಕ್ರೀಡಾಪಟುಗಳಿಗೆ ಉತ್ತೇಜನ ದೊರೆಯುತ್ತಿದೆ ಎಂದರು.
ಪ್ರತಿಭಾವಂತ ಕ್ರೀಡಾಪಟುಗಳು ಒಂದು ವೇಳೆ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದಲ್ಲಿ, ರಾಜ್ಯ ಸರಕಾರ ಎಲ್ಲಾ ರೀತಿಯ ನೆರವು ನೀಡಲಿದೆ.ಯಾವುದೇ ರೀತಿಯ ಹಿಂಜರಿಕೆ ಬೇಡ ಎಂದು ಸಲಹೆ ನೀಡಿದರು.
ಭಾರತದ ಕಬಡ್ಡಿ ತಂಡದ ನಾಯಕ ಕಪ್ತಾನ್ ಸಿಂಗ್‌ಗೆ 25 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ್ದಲ್ಲದೇ ಗ್ರಾಮದ ಅಭಿವೃದ್ಧಿಗಾಗಿ 51 ಲಕ್ಷ ರೂಪಾಯಿಗಳನ್ನು ಘೋಷಿಸಿದರು.