Webdunia - Bharat's app for daily news and videos

Install App

ನೂತನ ಕ್ರೀಡಾನೀತಿಯಿಂದ ರಾಜ್ಯಕ್ಕೆ ಹೆಚ್ಚಿನ ಪದಕ:ಹೂಡಾ

Webdunia
ಬುಧವಾರ, 1 ಡಿಸೆಂಬರ್ 2010 (12:59 IST)
ರಾಜ್ಯದಲ್ಲಿ ನೂತನ ಕ್ರೀಡಾ ನೀತಿ ಜಾರಿ ಹಾಗೂ ಕ್ರೀಡಾಪಟುಗಳಿಗೆ ಉತ್ತೇಜನ ನೀಡಿದ ಹಿನ್ನೆಲೆಯಲ್ಲಿ, ಕಾಮನ್‌ವೆಲ್ತ್ ಗೇಮ್ಸ್ ಮತ್ತು ಏಷ್ಯನ್ ಗೇಮ್ಸ್ ಪಂದ್ಯಾವಳಿಗಳಲ್ಲಿ ರಾಜ್ಯಕ್ಕೆ ಹೆಚ್ಚಿನ ಪದಕಗಳು ಬಂದಿವೆ ಎಂದು ರೋಹ್ಟಕ್ ಜಿಲ್ಲೆಯ ಕಾಂಗ್ರೆಸ್ ಸಂಸದ ದೀಪೆಂದರ್ ಸಿಂಗ್ ಹೂಡಾ ಹೇಳಿದ್ದಾರೆ.

ಏಷ್ಯನ್ ಗೇಮ್ಸ್ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಪಡೆದ ಭಾರತ ಕಬಡ್ಡಿ ತಂಡದ ನಾಯಕ ಕಪ್ತಾನ್ ಸಿಂಗ್ ಅವರನ್ನು ಸನ್ಮಾನಿಸಲು ಅಕಾಲ್‌ಘರ್ ಗ್ರಾಮದಲ್ಲಿ ಆಯೋಜಿಸಿದ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಹೂಡಾ, ಹರಿಯಾಣಾ ಸರಕಾರ ಜಾರಿಗೆ ತಂದ ನೂತನ ಕ್ರೀಡಾ ನೀತಿಗಳಿಂದ ಪ್ರತಿಭಾವಂತ ಕ್ರೀಡಾಪಟುಗಳಿಗೆ ಉತ್ತೇಜನ ದೊರೆಯುತ್ತಿದೆ ಎಂದರು.

ಪ್ರತಿಭಾವಂತ ಕ್ರೀಡಾಪಟುಗಳು ಒಂದು ವೇಳೆ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದಲ್ಲಿ, ರಾಜ್ಯ ಸರಕಾರ ಎಲ್ಲಾ ರೀತಿಯ ನೆರವು ನೀಡಲಿದೆ.ಯಾವುದೇ ರೀತಿಯ ಹಿಂಜರಿಕೆ ಬೇಡ ಎಂದು ಸಲಹೆ ನೀಡಿದರು.

ಭಾರತದ ಕಬಡ್ಡಿ ತಂಡದ ನಾಯಕ ಕಪ್ತಾನ್ ಸಿಂಗ್‌ಗೆ 25 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ್ದಲ್ಲದೇ ಗ್ರಾಮದ ಅಭಿವೃದ್ಧಿಗಾಗಿ 51 ಲಕ್ಷ ರೂಪಾಯಿಗಳನ್ನು ಘೋಷಿಸಿದರು.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ